Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಕೆಲಸದ ಆಸೆಗೆ ಬಿದ್ದು ಮಧ್ಯವರ್ತಿಗಳ ಜಾಲಕ್ಕೆ ಸಿಲುಕಬೇಡಿ!

---Advertisement---

ಬೆಂಗಳೂರು : ಸರ್ಕಾರಿ ಕೆಲಸ ಪಡೆಯಲು ಯಾವುದೇ ರೀತಿಯ ‘ಶಾರ್ಟ್‌ಕಟ್’ ಇಲ್ಲ. ಸಾರ್ವಜನಿಕರು ಹಾಗೂ ಉದ್ಯೋಗಾಕಾಂಕ್ಷಿಗಳು ಕೇವಲ ಪಾರದರ್ಶಕ ಮತ್ತು ಅರ್ಹತೆಯ ಆಧಾರಿತ ಆಯ್ಕೆ ಪ್ರಕ್ರಿಯೆಯನ್ನು ಮಾತ್ರ ನಂಬಬೇಕು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉದ್ಯೋಗಗಳ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ವಿಶೇಷ ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರು “ಹೇಗಾದರೂ ಸರಿ, ಸರ್ಕಾರಿ ಕೆಲಸ ಪಡೆಯಲೇಬೇಕು” ಎಂಬ ಹಠಾತ್ ಮನಸ್ಥಿತಿಯಿಂದ ಮೊದಲು ಹೊರಬರಬೇಕು ಎಂದು ಕರೆ ನೀಡಿದೆ.

ಯಾವುದೇ ಕಾರಣಕ್ಕೂ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳುವ ದಲ್ಲಾಳಿಗಳು ಅಥವಾ ಮಧ್ಯವರ್ತಿಗಳನ್ನು ಸಾರ್ವಜನಿಕರು ನಂಬಬಾರದು.ಉದ್ಯೋಗಾಕಾಂಕ್ಷಿಗಳ ಮುಗ್ಧತೆ ಮತ್ತು ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು, ಅದನ್ನೇ ತಮಗೆ ಅನುಕೂಲಕರ ಆಯುಧವಾಗಿ ಬಳಸಿಕೊಳ್ಳುತ್ತಾರೆ.ತಮಗೆ ಪ್ರಭಾವಿ ಮಂತ್ರಿಗಳು, ರಾಜಕಾರಣಿಗಳು ಹಾಗೂ ಉನ್ನತ ಸರ್ಕಾರಿ ಅಧಿಕಾರಿಗಳು ನಿಕಟವಾಗಿ ಗೊತ್ತು ಎಂದು ಸುಳ್ಳು ಹೇಳಿ, ನಂಬಿಕೆ ದ್ರೋಹ ಎಸಗುವ ಜಾಲ ಸಕ್ರಿಯವಾಗಿದೆ.

ಹಣ ವಸೂಲಿ ಜಾಲ

ಸರ್ಕಾರಿ ಕೆಲಸದ ಆಸೆ ಹುಟ್ಟಿಸಿ, ಪರೀಕ್ಷೆಯಿಲ್ಲದೆ ನೇರ ನೇಮಕಾತಿ ಮಾಡಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪೀಕುವ ದಂಧೆಕೋರರ ಬಗ್ಗೆ ಎಚ್ಚರದಿಂದ ಇರಬೇಕು.

ದೂರು ನೀಡಲು ಕರೆ:

ಸಾರ್ವಜನಿಕರ ಗಮನಕ್ಕೆ ಇಂತಹ ಯಾವುದೇ ವಂಚನೆ ಅಥವಾ ದಲ್ಲಾಳಿಗಳ ಜಾಲ ಬಂದಲ್ಲಿ, ಯಾವುದೇ ಭಯವಿಲ್ಲದೆ ತಕ್ಷಣವೇ ಪೊಲೀಸ್ ಇಲಾಖೆಗೆ ದೂರು ನೀಡಬೇಕು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now