Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೊಡ್ಡವರಾದ ಮೇಲೆ ಸಾಕಿ ಬೆಳೆಸಿದ ಹಿರಿಯರನ್ನು ಕಡೆಗಣಿಸಬೇಡಿ : ಬಸವನಾಗಿದೇವಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆ.30 : ವಯಸ್ಸಾದ ತಂದೆ-ತಾಯಿಗಳನ್ನು ಮಕ್ಕಳು ಮನೆಯಿಂದ ಹೊರ ಹಾಕಿ ಕ್ರೂರತ್ವ ಮೆರೆಯಬಾರದು ಎನ್ನುವ ಸಂದೇಶ ಸಾರುವುದಕ್ಕಾಗಿ ರಾಮನಗರದ 24 ವರ್ಷದ ಯುವತಿ ಚಿತ್ರರಾವ್ ಒಂಟಿಯಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಬೈಕ್‍ನಲ್ಲಿ ಪ್ರಯಾಣ ಹೊರಟಿದ್ದಾರೆ.

ನಗರದ ಹೊರವಲಯದ ಸೀಬಾರದ ಸಮೀಪವಿರುವ ಸರ್ದಾರ್ ಸೇವಾಲಾಲ್‍ಸ್ವಾಮಿ ಮಠದಲ್ಲಿ ಮಂಗಳವಾರ ಚಿತ್ರರಾವ್‍ರನ್ನು ಸ್ವಾಗತಿಸಲಾಯಿತು.

ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಮಾತನಾಡಿ ಮಕ್ಕಳು ಬೆಳೆದು ದೊಡ್ಡವರಾದ ಮೇಲೆ ತಮ್ಮನ್ನು ಸಾಕಿ ಬೆಳೆಸಿದ ಹಿರಿಯರನ್ನು ಕಡೆಗಣಿಸಬೇಡಿ. ಇಂದಿನ ಪೀಳಿಗೆಗೆ ಹಿರಿಯರ ಅನುಭವ ಅವಶ್ಯಕತೆಯಿದೆ. ಎನ್ನುವ ಸಂದೇಶವನ್ನು ಸಾರುವುದಕ್ಕಾಗಿ ಸುಮಾರು 3500 ಕಿ.ಮೀ.ಬೈಕ್‍ರ್ಯಾಲಿ ಹೊರಟಿರುವ ಚಿತ್ರರಾವ್ ದಿಟ್ಟತನ ಹಾಗೂ ಧೈರ್ಯವನ್ನು ಎಲ್ಲರೂ ಮೆಚ್ಚಬೇಕು. ಅವರ ಪಯಣ ಸಾರ್ಥಕವಾಗಲಿ ಎಂದು ಹಾರೈಸಿದರು.

ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾತನಾಡುತ್ತ ಮುಪ್ಪಿನ ಕಾಲದಲ್ಲಿ ತಂದೆ-ತಾಯಿಗಳನ್ನು ಕಡೆಗಣಿಸಿ ಮಕ್ಕಳು ವೃದ್ದಾಶ್ರಮಕ್ಕೆ ಸೇರಿಸುತ್ತಿರುವುದು ನೋವಿನ ಸಂಗತಿ. ಹಾಗಾಗಿ ಚಿತ್ರರಾವ್ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ತನ್ನ ಸ್ವಂತ ಹಣ ಖರ್ಚು ಮಾಡಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಬೈಕ್‍ರ್ಯಾಲಿ ಹೊರಟು ಎಲ್ಲರಿಗೂ ಮಾದರಿಯೆನಿಸಿಕೊಂಡಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೇದಾರ ಕೇತೇಶ್ವರ ಮಠದ ಬಸವ ಇಮ್ಮಡಿ ಮೇದಾರ ಕೇತೇಶ್ವರ ಸ್ವಾಮೀಜಿ ಮಾತನಾಡಿ ತಂದೆ-ತಾಯಿ ಇಬ್ಬರು ಮಕ್ಕಳಿಗೆ ಎರಡು ಕಣ್ಣುಗಳಿದ್ದಂತೆ. ಚಿಕ್ಕಂದಿನಿಂದಲೂ ಮಕ್ಕಳನ್ನು ಪ್ರೀತಿಯಿಂದ ಸಾಕಿ ಸಲಹಿದ ಅಪ್ಪ ಅಮ್ಮನನ್ನು ದೂರ ಮಾಡುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವುದು ದುರಂತ. ಕೆಲವರು ಮಕ್ಕಳು ನೀಡುವ ಕಿರುಕುಳವನ್ನು ಸಹಿಸಿಕೊಳ್ಳಲು ಆಗದೆ ಆತ್ಮಹತ್ಯೆ ಮಾಡಿಕೊಂಡಿರುವುದುಂಟು. ಇವೆಲ್ಲವನ್ನು ಸೂಕ್ಷ್ಮವಾಗಿ ಗಮನಿಸಿರುವ ಯುವತಿ ಚಿತ್ರರಾವ್ ಬೈಕ್‍ರ್ಯಾಲಿ ಹೊರಟು ಯುವ ಪೀಳಿಗೆಗೆ ತಂದೆ-ತಾಯಿಗಳನ್ನು ವೃದ್ದಾಶ್ರಮಕ್ಕೆ ಸೇರಿಸಬೇಡಿ ಎನ್ನುವ ಸಂದೇಶ ನೀಡುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ಮುಖ್ಯ ಶಿಕ್ಷಕ ಮೂರ್ತಿ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment