ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 27 : ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳಬಾರದೆಂದು ಡಿ.ವೈ.ಎಸ್ಪಿ. ದಿನಕರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸರ್ಕಾರಿ ಕಲಾ ಕಾಲೇಜು ಮತ್ತು ವಿಜ್ಞಾನ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.
ಮಾದಕ ವಸ್ತುಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚು ಆಕರ್ಷಿತರಾಗುವುದು ಸಹಜ. ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯ ಪೂರ್ಣ ಸಮಾಜ ನಿರ್ಮಿಸಬೇಕಾಗಿರುವುದರಿಂದ ಜಿಲ್ಲೆಯನ್ನು ನಶೆಮುಕ್ತವನ್ನಾಗಿಸುವಂತೆ ಮನವಿ ಮಾಡಿದರು.
ಎಲ್ಲಿಯಾದರೂ ಮಾದಕ ವಸ್ತುಗಳ ಸೇವನೆ ಕಂಡುಬಂದಲ್ಲಿ ಕಾನೂನು ಅಡಿ ಕಠಿಣ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದರು. ಬಡಾವಣೆ ಠಾಣೆ ಇನ್ಸ್‌ಪೆಕ್ಟರ್ ತಿಮ್ಮಣ್ಣ, ಸಬ್ ಇನ್ಸ್‌ಪೆಕ್ಟರ್ ರಘು ಇವರುಗಳು ವೇದಿಕೆಯಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















