ಚಿತ್ರದುರ್ಗ, ಮಾರ್ಚ್25 : ಕ್ಷಣಿಕ ಸುಖ ಕೊಡುವ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಕುಟುಂಬ ಒಡೆಯುವ ಜತೆಗೆ ಆರೋಗ್ಯವೂ ಹಾಳಾಗುತ್ತದೆ ಎಂದು ಜಿಲ್ಲಾಸ್ಪತ್ರೆಯ ಮಾನಸಿಕ ತಜ್ಞ ಡಾ.ಮಂಜುನಾಥ್ ಹೇಳಿದರು.
ನಗರದ ಕುಂಚಿಗನಾಳ್ ಬಳಿಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳು ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳು 5 ರಿಂದ 10 ನಿಮಿಷಗಳು ಮಾತ್ರ ಖುಷಿ ಕೊಡುತ್ತವೆ. ಮಾದಕ ಸೇವನೆಗೆ ಒಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಇದು ಮನುಷ್ಯನ ಆರೋಗ್ಯದ ಮೇಲೆ ಬಹಳಷ್ಟು ದುಷ್ಪರಿಣಾಮ ಬೀರಲಿದೆ. ಇವುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ದೇಹದ ಬೇರೆ ಬೇರೆ ಅಂಗಾಂಗಗಳು ಸಹ ನಿಧಾನಕ್ಕೆ ಹಾನಿಯಾಗುತ್ತವೆ. ತನ್ನ ದೇಹದ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ಮದ್ಯ ಮತ್ತು ಮಾದಕ ಈ ಎರಡು ಬೆಂಕಿಯ ಕೆನ್ನಾಲಿಗೆ ಹಾಗೂ ದುಷ್ಟರ ಕೂಟ ಇದ್ದಂತೆ. ಇವೆರಡರಲ್ಲಿ ಪ್ರವೇಶ ಮಾತ್ರ ಇರುತ್ತದೆಯೇ ಹೊರತು ಅಲ್ಲಿಂದ ನಿರ್ಗಮನ ಇರುವುದಿಲ್ಲ ಎಂದು ತಿಳಿಸಿದ ಅವರು, ದೇಶದ ಭವಿಷ್ಯದ ಪೀಳಿಗೆ ಯುವ ಜನತೆ ಆರೋಗ್ಯಪೂರ್ಣ ಹಾಗೂ ಸದೃಢವಾದ ಸಮಾಜ ನಿರ್ಮಾಣವಾಗಬೇಕಾದರೆ ಯುವ ಜನತೆ ದುಶ್ಚಟಗಳಿಂದ ದೂರ ಉಳಿಯಬೇಕು. ಈ ನಿಟ್ಟಿನಲ್ಲಿ ಯುವ ಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಮದ್ಯ ಮತ್ತು ಮಾದಕ ವ್ಯಸನಿಗಳು ಇಡೀ ಸಮಾಜಕ್ಕೆ ಕಂಟಕಪ್ರಾಯ ಆಗಲಿದ್ದಾರೆ. ಹಾಗಾಗಿ ಯುವ ಜನತೆ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಮಾದಕ ವ್ಯಸನ ಎಂದ ತಕ್ಷಣ ನಮಗೆ ಸಾಮಾನ್ಯವಾಗಿ ಮದ್ಯಪಾನ, ತಂಬಾಕು ಜಗಿಯುವುದು ನೆನಪಿಗೆ ಬರುತ್ತದೆ. ವಿದ್ಯಾರ್ಥಿ ದೆಸೆಯಲ್ಲಿ ಸ್ನೇಹಿತರೊಡನೆ ಗುಂಪುಗೂಡಿ ಕುತೂಹಲ ಮತ್ತು ಉತ್ಸುಕತೆಗಾಗಿ ಬೀಡಿ, ಸಿಗರೇಟ್ ಸೇದುವುದು, ಮದ್ಯಪಾನ ಮಾಡುವುದನ್ನು ಪ್ರಾರಂಭಿಸುತ್ತಾರೆ. ಇದರಿಂದ ಸಿಗುವ ಮಜಾ ಮೋಜು ದಿನದಿಂದ ದಿನಕ್ಕೆ ಹೆಚ್ಚುತ್ತದೆ. ಮೊದಲು ಇಷ್ಟು, ನಂತರ ಅಷ್ಟು ಎನ್ನತ್ತಾ ಕೊನೆಯಲ್ಲಿ ಅವಿಷ್ಟೂ ಬೇಕೆನ್ನುವ ಸೆಳತ ಪ್ರಾರಂಭವಾಗಿ, ಮಾದಕ ದ್ರವ್ಯ ಇಲ್ಲದಿದ್ದರೆ ನಡೆಯುವುದೇ ಇಲ್ಲಾ ಎನ್ನುವ ಪರಿಸ್ಥಿತಿ ಉಂಟಾಗಿ ಕಾಲೇಜಿನಲ್ಲಿ ಪಠ್ಯದ ಕಡೆ ಗಮನವೇ ಇಲ್ಲದಂತಾಗಿ ಕಲಿಯುವ ಚಟುವಟಿಕೆ ಹಾಗೂ ಶಕ್ತಿ ಕ್ಷೀಣಿಸುತ್ತದೆ ಎಂದರು.
ಇದರ ಜತೆಗೆ ಕುಟುಂಬದಲ್ಲಿ ಪೆÇೀಷಕರು ನಿಮ್ಮ ಬಗ್ಗೆ ಲಕ್ಷ್ಯ ಹರಿಸುವುದಿಲ್ಲ. ಬೇಡವಾದ ಜೀವನ ನಿಮ್ಮದಾಗುತ್ತದೆ. ಈಗಾಗಲೇ ಮಾದಕ ದ್ರವ್ಯ ಸೇವಿಸುತ್ತಿದ್ದರೆ ಬಿಡುವ ಪ್ರಯತ್ನ ನಡೆಸಿ, ವ್ಯಾಯಾಮ, ದ್ಯಾನ, ಯೋಗ, ಪ್ರಾಣಾಯಾಮಗಳ ನಿರಂತರ ಅಭ್ಯಾಸದಿಂದ ಸಕಾರಾತ್ಮಕ ಚಿಂತನೆಗಳು ಬರುತ್ತದೆ ಎಂದು ಸಲಹೆ ನೀಡಿದರು. ನಂತರ ಚಟುವಟಿಕೆಯ ಮೂಲಕ “ಗುಲಾಬಿ ಹಿಡಿ-ವ್ಯಸನ ಬಿಡಿ” ಎಂದು ಘೋಷಣೆ ನೀಡಿ ಸದೃಢ ಮನಸ್ಸು ಹೊಂದಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಬಿ.ಎಸ್.ಸುಹಾಸ್, ಮಾನಸಿಕ ಆರೋಗ್ಯದ ಕೌನ್ಸಿಲರ್ ಡಾ.ಶ್ರೀಧರ್, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಆಡಳಿತಾಧಿಕಾರಿ ಕೆ.ಪಿ.ಕಾಟೇಗೌಡ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…
ಚಿತ್ರದುರ್ಗ. ಮಾರ್ಚ್26 : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಬೆಂಗಳೂರು, ಮಾರ್ಚ್. 26 : ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…
ಹುಬ್ಬಳ್ಳಿ; ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ…
ಬೆಂಗಳೂರು; ಇತ್ತೀಚೆಗಷ್ಟೇ ನಟಿ ನೇಹಾಗೌಡ ಹಾಗೂ ಚಂದನ್ ಗೌಡ ಅವರು ತಮ್ಮ ಮಗಳ ನಾಮಕರಣವನ್ನು ಮಾಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರು,…