ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ನಾಯಕ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದಾರೆ. ಇದರಿಂದ ರಾಜೀವ್ ಗೌಡ ವಿರುದ್ಧ ಎರಡೆರಡು ಎಫ್‌ಐಆರ್ ದಾಖಲಾಗಿದ್ದು, ಬಂಧನದ ಭೀತಿಯಿಂದ ಕಾಂಗ್ರೆಸ್ ಮುಖಂಡ ಎಸ್ಕೇಪ್ ಆಗಿದ್ದಾನೆ. ಶಿಡ್ಲಘಟ್ಟ ಪೊಲೀಸರು ರಾಜೀವ್ ಗೌಡನನ್ನು ಬಂಧಿಸೋದಕ್ಕೆ ಹುಡುಕಾಟ ಶುರು ಮಾಡಿದ್ದಾರೆ.
ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ರಸ್ತೆ ಮಧ್ಯೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಕ್ರಮವಾಗಿ ಬ್ಯಾನರ್ ಹಾಕಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರು ಅಕ್ರಮ ಬ್ಯಾನರ್ ಅನ್ನು ತೆರವುಗೊಳಿಸಿದ್ದರು. ಈ ಸಂಬಂಧ ಅಮೃತಾ ಘೌಡ ಅವರಿಗೆ ಕರೆ ಮಾಡಿ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಬೆಂಕಿ ಹಚ್ತೀನಿ, ಸುಟ್ಟು ಹಾಕ್ಬಿಡ್ತೀನಿ ಎಂದು ಹೌಹಾರಿದ್ದ. ಇದರಿಂದ ಬೇಸರಗೊಂಡ ಪೌರಾಯುಕ್ತೆ ಅಮೃತಾ ಗೌಡ ಮೇಲಧಿಕಾರಿಗಳಿಗೆ ದೂರು ನೀಡಿದ್ದರು.
ಈ ಸಂಬಂಧ ಪೌರಾಯುಕ್ತ ಕಚೇರಿ ಅಧಿಕಾರಿಗಳು, ಸಿಬ್ಬಂದಿ ವರ್ಗ ರಾಜೀವ್ ಗೌಡ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಪ್ರತಿಪಕ್ಷಗಳು ಕೂಡ ರಾಜೀವ್ ಗೌಡ ಬಂಧನಕ್ಕೆ ಆಗ್ರಹಿಸಿದ್ದವು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜೀವ್ ಗೌಡ ಮಾಧ್ಯಮದ ಎದುರು ಬಂದು ನಾನು ಪೌರಾಯುಕ್ತೆಗೆ ಬೈದಿದ್ದಲ್ಲ. ಬ್ಯಾನರ್ ತೆರವುಗೊಳಿಸಿದವರಿಗೆ ಬೈದೆ. ಪೌರಾಯುಕ್ತೆ ಅಮೃತಾ ಘೌಡ ನನ್ನ ಸಹೋದರಿಯಂತೆ. ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ ಎಂದು ಕ್ಷಮೆಎಯಾಚಿಸಿದ್ದರು. ಆದರೆ, ಇದು ಅಷ್ಟಕ್ಕೆ ಮುಗಿಯಲಿಲ್ಲ.
ಅಮೃತಾ ಗೌಡ ಅವರು ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು. ಇದ್ರ ಬೆನ್ನಲ್ಲೇ ಜೆಡಿಎಸ್ ಮುಖಂಡರು ಕೂಡ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ದೂರು ನೀಡಿದರು. ರಾಜೀವ್ ಗೌಡ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತಮ್ಮ ಎರಡೂ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ. ರಾಜೀವ್ ಗೌಡ ಬಂಧನಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಎರಡು ತಂಡಗಳನ್ನು ರಚಿಸಿದ್ದಾರೆ. ಈಗ ಎರಡೂ ತಂಡಗಳು ರಾಜೀವ್ ಗೌಡನನ್ನು ಬಂಧಿಸಲು ಶೋಧ ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











