Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸೊಸೆಗೆ ವರದಕ್ಷಿಣೆ‌ ಕಿರುಕುಳ : ಎಸ್.ನಾರಾಯಣ್ ವಿರುದ್ಧ ಎಫ್ಐಆರ್

---Advertisement---

ಬೆಂಗಳೂರು: ನಿರ್ದೇಶಕ ಎಸ್ ನಾರಾಯಣ್ ಅವರ ಮಗ – ಸೊಸೆಯ ಸಂಸಾರ ಇದೀಗ ಪೊಲೀಸ್ ಠಾಣೆ‌ ಮೆಟ್ಟಿಲೇರಿದೆ. ಸೊಸೆ ಪವಿತ್ರಾ ಅವರು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ತಮ್ಮ ಮಾವನ ವಿರುದ್ಧವೇ ದೂರು ನೀಡಿದ್ದಾರೆ. 2021ರಲ್ಲಿ ಎಸ್ ನಾರಾಯಣ್ ಪುತ್ರ ಪವನ್ ಹಾಗೂ ಪವಿತ್ರಾ ಮದುವೆಯಾಗಿತ್ತು. ಅದ್ದೂರಿಯಾಗಿಯೇ ನಡೆದಿದ್ದ ಈ ಮದುವೆ ಇದೀಗ ಮುರಿದು ಬೀಳುವ ಸ್ಥಿತಿ ತಲುಪಿದೆ.

ಮದುವೆಯಾಗಿ ನಾಲ್ಕು ವರ್ಷ ಕಳೆಯುವುದರೊಳಗೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರದಕ್ಷಿಣೆ ಕಿರುಕುಳದಡಿಯಲ್ಲಿ ಸೊಸೆ ಪವಿತ್ರಾ ದೂರು ನೀಡಿದ್ದು, ಎಸ್ ನಾರಾಯಣ್, ಅವರ ಪತ್ನಿ ಭಾಗ್ಯವತಿ ಹಾಗೂ ಗಂಡ ಪವನ್ ವಿರುದ್ಧ ದೂರು ನೀಡಿದ್ದಾರೆ. ಮದುವೆಯಲ್ಲಿ ಈಗಾಗಲೇ ವರದಕ್ಷಿಣೆಯನ್ನು ನೀಡಲಾಗಿದೆ. ಆದರೂ ಹೆಚ್ಚಿನ ವರದಕ್ಷಿಣೆ ಹಣಕ್ಕೆ ಬೇಡಿಕೆ ಇಡಲಾಗಿದೆ ಎಂದಿದ್ದಾರೆ.

ಇದೇ ವೇಳೆ ಮನೆಯನ್ನು ತಾನೇ ನಡೆಸುತ್ತಿದ್ದರ ಬಗ್ಗೆಯೂ ಹೇಳಿದ್ದಾರೆ. ಪವನ್ ಗೆ ಕೆಲಸ ಇಲ್ಲ. ಹೀಗಾಗಿ ನಾನೇ ಕೆಲಸ ಮಾಡಿ ಮನೆ ನಡೆಸುತ್ತಿದ್ದೆ. ಆದರೆ ಕಲಾ ಸಾಮ್ರಾಟ್ ಅಕಾಡೆಮಿ ಆರಂಭಿಸಲು ಹಣಕ್ಕೆ ಬೇಡಿಕೆ ಇಡಲಾಯ್ತು. ಆಗ ನಾನು ನಮ್ಮ ತಾಯಿಯ ಒಡವೆಯನ್ನು ಅಡವಿಟ್ಟು ಹಣ ಕೊಟ್ಟಿದ್ದೆ. ಆದರೆ ಕಲಾಸಾಮ್ರಾಟ್ ಅಕಾಡೆಮಿ ಲಾಸ್ ಆಗಿ ಕ್ಲೋಸ್ ಆಯ್ತು ಎಂದು ಪವಿತ್ರಾ ಅಳಲು ತೋಡಿಕೊಂಡಿದ್ದಾರೆ. ಜೊತೆಗೆ ಪವಿತ್ರಾ ಅವರು ತಮ್ಮ ಹೆಸರಲ್ಲಿ 10 ಲಕ್ಷ ಸಾಲ ಮಾಡಿ ಕೂಡ ಕೊಟ್ಟಿದ್ದರಂತೆ.

ಈ ಸಂಬಂಧ ಮಾತನಾಡಿರುವ ಎಸ್.ನಾರಾಯಣ್, ಪವಿತ್ರಾ ಮನೆ ಬಿಟ್ಟು ಹೋಗಿ 10 ತಿಂಗಳಾಗಿದೆ. ಮನೆ ಬಿಟ್ಟು ಹೋಗಿದ್ದು ಯಾಕೆ ಅಂತ ಕೇಳಿದರೆ ನಾನು ಅವರ‌ಹೆಸರಿಗೆ‌ಮಸಿ ಬಳಿದಂತೆ ಆಗುತ್ತದೆ. ವಯಸ್ಸು, ವ್ಯಕ್ತಿತ್ವ ಎರಡಕ್ಕೂ ಪವಿತ್ರಾ ಬೆಲೆ ಕೊಡ್ತಾ ಇರಲಿಲ್ಲ. ಮದುವೆ ಆಗಿ‌ ಒಂದು ತಿಂಗಳಿಗೇನೆ ಮಾತುಕತೆ ನಿಂತು ಹೋಯ್ತು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now