Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

---Advertisement---

ಚಿತ್ರದುರ್ಗ. ಏ.14 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ನಗರದಲ್ಲಿ ಸ್ತಬ್ದಚಿತ್ರಗಳು ಹಾಗೂ ಕಲಾತಂಡಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು.


ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಆನೆಬಾಗಿಲು, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚನ್ನಮ್ಮ, ಮಹಾವೀರ, ಅಂಬೇಡ್ಕರ್, ಮದರಕರಿ ನಾಯಕ ವೃತ್ತಗಳ ಮಾರ್ಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ತಲುಪಿತು.


ಮೆರವಣಿಗೆಯಲ್ಲಿ ನಾಸಿಕ್ ಡೋಲ್, ತಾಷರಾಮ್ ಡೋಲ್ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನಾ ಸಭೆಯ ಅಧ್ಯಕ್ಷ ಡಾ.ಬಾಬು ರಾಜೇಂದ್ರ ಪ್ರಸಾದ್ ಅವರಿಗೆ ಸಂವಿಧಾನ ಪ್ರತಿ ಹಸ್ತಾಂತರಿಸುವ ಸ್ತಬ್ದ ಗಮನ ಸೆಳೆಯಿತು. ಇದರೊಂದಿಗೆ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಅಡಿ ದೊರೆಯುವ ಸರ್ಕಾರದ ಸೌಲತ್ತುಗಳ ಮಾಹಿತಿಯನ್ನು ಪ್ರಚುರಪಡಿಸಲಾಯಿತು.


ಮೆರವಣಿಗೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿ.ಪಂ. ಸಿಇಓ ಡಾ.ಆಕಾಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಉಪ ವಿಭಾಗಾಧಿಕಾರಿ ಕಾಂತರಾಜು ಸೇರಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now