Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಾ.ಬಾಬು ಜಗಜೀವನ್ ರಾಮ್‍ರವರ 117ನೇ ಜನ್ಮ ದಿನ : ಸರಳ ಆಚರಣೆ

---Advertisement---

ಚಿತ್ರದುರ್ಗ. ಏ.05:  ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಡಾ.ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

 

ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಪ್ರೊ.ಲಿಂಗಪ್ಪ ಅವರು ಡಾ.ಬಾಬು ಜಗಜೀವನ್‍ರಾಂ ಅವರ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಸಮುದಾಯಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment