ಚಿತ್ರದುರ್ಗ. ಸೆ.12: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭೀವೃದ್ಧಿ ನಿಗಮ ಹಾಗೂ ಪ.ಜಾತಿ ಅಲೆಮಾರಿ, ಅರೆ ಅಲೆಮಾರಿಗಳ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ.
ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗಳ ಕುರಿತಾಗಿ ಸವಿವರವಾದ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್ https://swdcorp.karnataka.gov.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಆಸಕ್ತರು https://sevasindhu.karnataka.gov.in ತಂತ್ರಾAಶದ ಮೂಲಕ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08194-200214 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…