Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಾ.ಡಿ.ವೀರೇಂದ್ರಹೆಗಡೆರವರು ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ನಲವತ್ತು ವರ್ಷಗಳಿಂದ ಶ್ರಮಿಸುತ್ತಿದ್ದಾರೆ : ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಗುಣಗಾನ

Facebook
Twitter
Telegram
WhatsApp

ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್.10  : ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಕಳೆದ ನಲವತ್ತು ವರ್ಷಗಳಿಂದಲೂ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಅತ್ಯುತ್ತಮ ಕೆಲಸ ಮಾಡಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಗುಣಗಾನ ಮಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇವರುಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಪ್ರಸನ್ನ ಗಣಪತಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಗಾಂಧಿ ಜಯಂತಿ ಸಂಭ್ರಮಾಚರಣೆ, ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಅರವತ್ತು ಲಕ್ಷಕ್ಕೂ ಹೆಚ್ಚು ಮಹಿಳೆಯರು ಸ್ವ-ಸಹಾಯ ಸಂಘದಲ್ಲಿ ಸದಸ್ಯರುಗಳಾಗಿದ್ದು, ಎಲ್ಲರ ಬದುಕಿಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಹಾಗೂ ಶ್ರೀಮತಿ ಹೇಮಾವತಿ ಹೆಗಡೆ ಇವರುಗಳು ಶ್ರಮಿಸುತ್ತಿದ್ದಾರೆ. ಲಕ್ಷಾಂತರ ನಿರುದ್ಯೋಗಿ ಯುವಕರಿಗೂ ರುಡ್‍ಸೆಟ್ ಮೂಲಕ ತರಬೇತಿಯನ್ನು ಕೊಡಲಾಗುತ್ತಿದೆ. ಸಮಾಜಕ್ಕೆ ಉಪಯುಕ್ತವಾದ ಕಾರ್ಯದಲ್ಲಿ ತೊಡಗಿರುವ ಡಾ.ಡಿ.ವೀರೇಂದ್ರ ಹೆಗಡೆರವರ ಸಮಾಜಮುಖಿ ಕೆಲಸವನ್ನು ಗುರುತಿಸಿ ದೇಶದ ಪ್ರಧಾನಿ ನರೇಂದ್ರಮೋದಿ ರಾಜ್ಯಸಭೆ ಸದಸ್ಯರನ್ನಾಗಿ ನೇಮಕ ಮಾಡಿಕೊಂಡಿದ್ದಾರೆಂದು ಹೇಳಿದರು.

ಮನುಷ್ಯನಾಗಿ ಹುಟ್ಟಿದ ಮೇಲೆ ಯಾವುದಾದರೂ ಒಂದು ಒಳ್ಳೆಯ ಕೆಲಸ ಮಾಡಿ ಸಮಾಜದ ಋಣ ತೀರಿಸಬೇಕು. ಹೊಳಲ್ಕೆರೆ ತಾಲ್ಲೂಕಿನಲ್ಲಿ 35 ಸಾವಿರ ಮಹಿಳೆಯರು ಸ್ವ-ಸಹಾಯ ಸಂಘದಲ್ಲಿ ಸದಸ್ಯರಾಗಿದ್ದಾರೆ. ಮಹಿಳೆಯರು ಒಂದೆಡೆ ಕುಳಿತು ಚರ್ಚಿಸಲು ಪಟ್ಟಣದಲ್ಲಿ ಯೋಗ್ಯವಾದ ಸ್ಥಳ ನೀಡಿದ್ದೇನೆ. ಅದಕ್ಕೆ ಡಾ.ಡಿ.ವೀರೇಂದ್ರ ಹೆಗಡೆರವರು ನಾಲ್ಕು ಕೋಟಿ ರೂ.ಗಳನ್ನು ಕೊಟ್ಟಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡ ಕೆಲಸ ನಡೆಯುತ್ತಿದೆ. ಪಟ್ಟಣದ ಹೊಸದುರ್ಗ ರಸ್ತೆಯಲ್ಲಿರುವ ಶಿವನ ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಕೂರಿಸಲಾಗಿದೆ. ಅಲ್ಲಿನ ಸ್ಥಳವನ್ನು ಈ ಸಂಸ್ಥೆಗೆ ಧಾರೆ ಎರೆಯುತ್ತಿದ್ದೇನೆಂದರು.

ಸಾರ್ವಜನಿಕರಿಗೆ ಒಳಿತು ಮಾಡುವ ಯೋಜನೆಗೆ ಎಲ್ಲರೂ ಕೈಜೋಡಿಸಬೇಕಿದೆ. ಹುಟ್ಟು-ಸಾವಿನ ನಡುವೆ ಒಳ್ಳೆಯ ಕೆಲಸ ಮಾಡಬೇಕೆಂಬ ಸದುದ್ದೇಶದಿಂದ ಡಾ.ಡಿ.ವೀರೇಂದ್ರಹೆಗಡೆರವರು ಇಡಿ ಸ್ತ್ರೀಕುಲಕ್ಕೆ ಗೌರವ ತಂದಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿಯೂ ಈ ಯೋಜನೆ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದೆ. ಗಾಂಧಿಜಿಯ ಕನಸಿನಂತೆ ಜನಜಾಗೃತಿ ಮೂಲಕ ದುಶ್ಚಟಕ್ಕೆ ಒಳಗಾದವರನ್ನು ವ್ಯಸನಮುಕ್ತರನ್ನಾಗಿ ಮಾಡುತ್ತಿರುವುದು ಪುಣ್ಯದ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಿವಿಲ್ ನ್ಯಾಯಾಧೀಶರಾದ ಎಂ.ಪಿ.ಉಮೇಶ್ ಜಾಥಕ್ಕೆ ಚಾಲನೆ ನೀಡಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಮಾರುತೇಶ್ ಎಸ್. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸುಮಿತ್ರಕ್ಕ, ತಹಶೀಲ್ದಾರ್ ಶ್ರೀಮತಿ ಬೀಬಿ ಫಾತಿಮ, ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್‍ಪೂಜಾರಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರುಗಳಾದ ಎ.ಸಿ.ಗಂಗಾಧರಪ್ಪ, ಮೋಹನ್ ನಾಗರಾಜ್, ಜಿ.ಟಿ.ಪ್ರೇಮಕಲ, ದೇವರಾಜ್, ಸೌಮ್ಯರವಿಶಂಕರ್, ದೇವಣ್ಣ, ರಮೇಶ್‍ಗೌಡ್ರು, ಶ್ರೀಮತಿ ಸವಿತ, ಪುಟ್ಟಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಆರ್.ಅಶೋಕ್, ಮಾಜಿ ಉಪಾಧ್ಯಕ್ಷ ಕೆ.ಸಿ.ರಮೇಶ್, ಹೊಳಲ್ಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಶಿವಮೂರ್ತಿ, ಎಂ.ಬಿ.ನಾಗರಾಜ್ ಕಾಕನೂರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

error: Content is protected !!