Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಹೆಚ್ಚಾಗಲಿ ; ಡಾ. ಗಾಯಿತ್ರಮ್ಮ ಕರೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ 18: ನಗರದ ಎಸ್.ಜೆ.ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ 2025-26ನೇ ಸಾಲಿನ ಅಂತಿಮ ವರ್ಷದ ಬಿ.ಎ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದ ಆಂಶಿಕ ಕಿರು ಪ್ರಬಂಧಗಳ ಮೌಖಿಕ ಪರೀಕ್ಷೆಯನ್ನು ಇಂದು ಯಶಸ್ವಿಯಾಗಿ ನಡೆಸಲಾಯಿತು.

ಈ ಮೌಖಿಕ ಪರೀಕ್ಷೆಯ ಬಾಹ್ಯ ಮೌಲ್ಯಮಾಪಕರಾಗಿ ಚಿತ್ರದುರ್ಗದ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಗಾಯಿತ್ರಮ್ಮ ಟಿ. ಅವರು ಆಗಮಿಸಿದ್ದರು. ವಿದ್ಯಾರ್ಥಿಗಳ ಪ್ರಬಂಧಗಳನ್ನು ಮೌಲ್ಯೀಕರಿಸಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ಅತ್ಯುತ್ತಮವಾದ ಪ್ರಯತ್ನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ನಿಮ್ಮಿಂದ ಇನ್ನು ಹೆಚ್ಚಿನ ಸಂಶೋಧನಾ ಅಧ್ಯಯನಗಳು ನಡೆಯಲಿ,” ಎಂದು ಆಶಿಸಿ, ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು.

ಬರವಣಿಗೆಯ ಸ್ಪಷ್ಟತೆಗೆ ಕಿರು ಪ್ರಬಂಧ ಸಹಕಾರಿ: ಡಾ. ರಮೇಶ್ ಕೆ.

ನಂತರ ಡಾ. ರಮೇಶ್ ಕೆ. ಮಾತನಾಡಿ, “ನೀವು ರಚಿಸಿರುವ ಈ ಕಿರು ಪ್ರಬಂಧ ಮುಂದೊಂದು ದಿನ ನಿಮ್ಮ ನೆನಪಿನಲ್ಲಿ ಉಳಿಯುವಂತಹುದಾಗಿದೆ. ಇಂತಹ ಪ್ರಬಂಧಗಳ ರಚನೆಯು ಓದಿನ ಪ್ರಾಥಮಿಕ ಮಾಹಿತಿಯನ್ನು ಒದಗಿಸುವುದರ ಜೊತೆಗೆ ಬರವಣಿಗೆಯಲ್ಲಿ ಸ್ಪಷ್ಟತೆ ಹಾಗೂ ವಿಷಯ ಗ್ರಹಿಕೆಯನ್ನು ಉತ್ತಮಪಡಿಸುತ್ತದೆ. ಯಾವುದೇ ಒಂದು ವಿಷಯದ ಬಗ್ಗೆ ಆಳವಾದ ಜ್ಞಾನ ಪಡೆಯಲು ಮತ್ತು ಮುಂದೆ ಉನ್ನತ ಸಂಶೋಧನೆಗಳನ್ನು ಮಾಡಲು ಇದು ಸಹಕಾರಿಯಾಗಲಿದೆ,” ಎಂದು ಹೇಳುತ್ತಾ ಎಲ್ಲರಿಗೂ ಶುಭ ಹಾರೈಸಿದರು.

ಪೋಷಕರಿಗೆ ಹಾಗೂ ಸಮಾಜಕ್ಕೆ ಕೀರ್ತಿ ತನ್ನಿ: ಪ್ರಾಂಶುಪಾಲರ ಕರೆ

ಕಾಲೇಜಿನ ಪ್ರಾಂಶುಪಾಲರಾದ ಡಾ. ಎಲ್. ಈಶ್ವರಪ್ಪ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ನೀವೀಗಾಗಲೇ ಪದವಿ ಶಿಕ್ಷಣದ ಕೊನೆಯ ಮೆಟ್ಟಿಲಲ್ಲಿ ನಿಂತಿದ್ದೀರಿ. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆದು, ಸಮಾಜಕ್ಕೂ ಹಾಗೂ ನಿಮ್ಮ ತಂದೆ-ತಾಯಿಗೂ ಒಳ್ಳೆಯ ಹೆಸರನ್ನು ತರಬೇಕು,” ಎಂದು ಕರೆ ನೀಡಿದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಿ.ಟಿ. ಜಯಣ್ಣ ಅವರು ಮಾತನಾಡಿ, “ವಿದ್ಯಾರ್ಥಿಗಳು ಈಗಿನಿಂದಲೇ ಅಧ್ಯಯನದ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿ ಇಂದಿಗೂ ಹಲವು ವಿಷಯಗಳು ಅಧ್ಯಯನಕ್ಕೊಳಪಡದೆ ಅಜ್ಞಾತವಾಗಿಯೇ ಉಳಿದಿವೆ. ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷಿತ ಕ್ಷೇತ್ರಗಳ ಬಗ್ಗೆ ನಿಮ್ಮ ಸಂಶೋಧನೆಗಳು ನಡೆದು, ಸಮಾಜಕ್ಕೆ ಬೆಳಕಾಗಲಿ,” ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ. ಸುಧಾರಾಣಿ ಹಾಗೂ ಡಾ. ಪುಷ್ಪಾ ಕೆ. ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now