Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಾ. ಹೇಮಾವತಿ ಹೆಗ್ಗಡೆ ಹುಟ್ಟುಹಬ್ಬ: ಬಡ ಕುಟುಂಬಗಳಿಗೆ ಮಾಶಾಸನ, ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಟ್ರಸ್ಟಿಗಳು ಹಾಗೂ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾಗಿರುವಂತಹ ಡಾಕ್ಟರ್ ಹೇಮಾವತಿವಿ ಹೆಗ್ಗಡೆಯವರು ರಾಜ್ಯದ ಕಡುಬಡವ ಕುಟುಂಬದವರಿಗೆ ಮಾಶಾಸನ ನೀಡುತಿದ್ದಾರೆ.

 

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪ್ರಾದೇಶಿಕ ಕಚೇರಿಯಲ್ಲಿ  2132  ಕುಟುಂಬಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡುವುದರೊಂದಿಗೆ ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಿ ವಾತ್ಸಲ್ಯ ಮಿಕ್ಸ್ ಆಹಾರ ಕಿಟ್ಟ್ ಮತ್ತು
950 ಕ್ಕೂ  ಅಧಿಕ ವಾತ್ಸಲ್ಯ ಮನೆಗಳನ್ನು ನಿರ್ಮಾಣ ಮಾಡುವುದರ ಮೂಲಕ ಕಡುಬಡವರ ಕುಟುಂಬಕ್ಕೆ ಆಶ್ರಯದಾತರಾಗಿರುತ್ತಾರೆ.

 

ಏಪ್ರಿಲ್ 02 ರಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾಶಾಸನ ನೀಡುತ್ತಿರುವ ಫಲಾನುಭವಿಗಳಿಗೆ ಹಣ್ಣು ಹಂಪಲು ನೀಡುವುದರ ಮೂಲಕ ಹುಟ್ಟುಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಾಯಿತು. ಈ ಸಂದರ್ಭ ಮಾಶಾಸನ ಫಲಾನುಭವಿಗಳಿಗೆ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಗೀತಾ ಬಿ, ಚಿತ್ರದುರ್ಗ ಜಿಲ್ಲಾ ನಿರ್ದೇಶಕರಾದಂತಹ ಕಮಲಾಕ್ಷಿ , ಚಿತ್ರದುರ್ಗ ತಾಲ್ಲೂಕು ಯೋಜನಾಧಿಕಾರಿಗಳಾದ ಚಂದ್ರಹಾಸ್. ಬಿ, ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿ ಶ್ರೀಮತಿ ರತ್ನ, ಚಿತ್ರದುರ್ಗ ತಾಲೂಕಿನ ಸಮನ್ವಯುಧಿಕಾರಿ  ಶ್ರೀಮತಿ ಚಂದ್ರಮ್ಮ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಂದ ಹುಟ್ಟು ಹಬ್ಬದ ಪ್ರಯುಕ್ತ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಶುಭ ಕೋರಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...