ಚಿತ್ರದುರ್ಗ, (ಮಾ.21) : ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸಮಿತಿಯ ಉಪಾಧ್ಯಕ್ಷರಾಗಿ ಕವಿ, ವಿಮರ್ಶಕ, ಕಥೆಗಾರ ಡಾ. ಲೋಕೇಶ ಅಗಸನಕಟ್ಟೆ ಅವರನ್ನು ಸಭೆಯು ಸರ್ವಾನುಮತದಿಂದ ನೇಮಕ ಮಾಡಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 87ನೇ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಹಾಗೂ 2022-23ನೇ ಸಾಲಿನ ಅಯ-ವ್ಯಯ ಸಭೆಯನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ನೂತನ ಉಪಾಧ್ಯಕ್ಷರಿಗೆ ಪುಸ್ತಕ ನೀಡುವ ಶುಭ ಕೋರಿದರು.
ಸಭೆಯಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಸಿ.ಬಿ.ಶೈಲ, ಲಿಂಗರಾಜು, ಚೋಳಗಟ್ಟ ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್ ಉಗ್ರಾಣ, ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ ಸದಸ್ಯೆ ನಾಗರತ್ನಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಹೊಳಲ್ಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ತಿಪ್ಪೇಸ್ವಾಮಿ ಸೇರಿದಂತೆ ಗ್ರಂಥಾಲಯ ಸಿಬ್ಬಂದಿ ಇದ್ದರು.