ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 30 : ನಕಲಿ ವೈದ್ಯಕೀಯ ಸರ್ಟಿಫಿಕೇಟ್‍ಗಳನ್ನು ನೀಡಿ ನಿಜವಾಗಿಯೂ ಶ್ರವಣ ದೋಷವುಳ್ಳವರಿಗೆ ವಂಚನೆ ಮಾಡಿರುವ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಪಿ.ರವೀಂದ್ರ ಇವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾ ಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ಒತ್ತಾಯಿಸಿದರು.
ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹತ್ತು ಹದಿನೈದು ವರ್ಷಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಜ್ಞರಾಗಿದ್ದ ಡಾ.ಪಿ.ರವೀಂದ್ರ ಲಂಚ ಪಡೆದು ಯಾವುದೇ ದೋಷವಿಲ್ಲದವರಿಗೂ ಶ್ರವಣ ದೋಷವಿದೆ ಎಂದು ಸರ್ಟಿಫಿಕೇಟ್‍ಗಳನ್ನು ನೀಡಿದ್ದಾರೆ. ಸಲೀಸಾಗಿ ಕಿವಿ ಕೇಳಿಸುವವರಿಗೆ ದೋಷವಿದೆ ಎಂದು ವೈದ್ಯಕೀಯ ಪ್ರಮಾಣ ಪತ್ರಗಳನ್ನು ನೀಡಿ ಅರ್ಹರಿಗೆ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಚಿತ್ರದುರ್ಗ ಬೆಸ್ಕಾಂನಲ್ಲಿ ಎಂಟು ಮಂದಿ ಕೆಲಸ ಪಡೆದಿರುವುದನ್ನು ತನಿಖೆ ನಡೆಸುವಂತೆ ಒತ್ತಾಯಿಸಿದಾಗ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯವರು ಪರಿಶೀಲಿಸಿ ಒಬ್ಬರಿಗೆ ಮಾತ್ರ ಕಿವಿ ಕೇಳಿಸುತ್ತೆ ಉಳಿದ ಏಳು ಮಂದಿಗೆ ಶ್ರವಣ ದೋಷವಿಲ್ಲ ಎಂಬ ಸರ್ಟಿಫಿಕೇಟ್ ನೀಡಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ವಾಕ್‍ಶ್ರವಣ ಸಂಸ್ಥೆಯವರು ಪರಿಶೀಲಿಸಿದಾಗ ಡಾ.ಪಿ.ರವೀಂದ್ರ ನೀಡಿರುವ ಸರ್ಟಿಫಿಕೇಟ್‍ಗಳು ಫೇಕ್ ಎನ್ನುವುದು ಖಾತ್ರಿಯಾಗಿದೆ. ಅಮಾನತ್ತುಗೊಳಿಸಿ ತನಿಖೆಗೊಳಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಚಂದ್ರಪ್ಪಘಾಟ್, ತಿಪ್ಪೇಸ್ವಾಮಿ ಬೆಳಗಟ್ಟ, ಕೃಷ್ಣಪ್ಪ, ಪ್ರಹ್ಲಾದ್, ದೇವರಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











