
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾ.18) : ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರನ್ನ ಡಾ.ಪುನೀತ್ ರಾಜ್‍ಕುಮಾರ್ ಜನ್ಮ ದಿನಾಚರಣೆ ಅಂಗವಾಗಿ “ಸ್ಫೂರ್ತಿ ದಿನ” ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಪ್ರಸ್ತುತ ಸಮಸ್ಯೆಗಳಾದ ಸೈಬರ್ ಕ್ರೈಮ್, ಅತೀಯಾದ ಮೊಬೈಲ್ ಬಳಕೆ ಹಾಗೂ ಹೆಲ್ಮೆಟ್ ಕಡ್ಡಾಯ ಇವುಗಳ ಬಗ್ಗೆ ಜಾಗೃತಿ ಮೂಡಿಸಿದರು.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಬಿ.ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಫೂರ್ತಿ ದಿನದ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಿಟಿ ಉಪನ್ಯಾಸಕ ಪ್ರದೀಪ್, ಜಿಟಿಟಿಸಿಯ ಕೆ.ಪಿ.ಕಾಟೇಗೌಡ ಮತ್ತು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದರು. ಮನೋಜ್ ಎಸ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.
GIPHY App Key not set. Please check settings