ಚಿತ್ರದುರ್ಗ, (ಡಿ.05) : ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರೂಪ ಆರ್.(52) ಅವರು ಇಂದು ಬೆಳಿಗ್ಗೆ ಅಕಾಲಿಕವಾಗಿ ನಿಧನ ಹೊಂದಿದರು.
ಇವರ ಪತಿ ಡಾ. ರವಿ ಕೆ.ಜಿ. (ಗಿರಿಶಾಂತ ಅರ್ಥೋಕೇರ್) ಇಬ್ಬರು ಪುತ್ರರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಡಿಹೆಚ್ಓ ಡಾ.ರಂಗನಾಥ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಅಪಾರ ಸಂಖ್ಯೆಯ ಸಾರ್ವಜನಿಕರು ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.