Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್‍ಗಾಂಧಿಯವರಿಗೆ ವಿಭೂತಿಧಾರಣೆ ಮಾಡಿ ಲಿಂಗದೀಕ್ಷೆ ನೀಡಿದ ಡಾ. ಶಿವಮೂರ್ತಿ ಮುರುಘಾ ಶರಣರು

Facebook
Twitter
Telegram
WhatsApp

ಚಿತ್ರದುರ್ಗ,(ಆ.03) :  ಎಐಸಿಸಿ ನಾಯಕ ಸಂಸದ, ರಾಹುಲ್‍ಗಾಂಧಿ ಮುರುಘಾಮಠಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದು, 50ಕ್ಕು ಹೆಚ್ಚು ಸ್ವಾಮೀಜಿಗಳೊಟ್ಟಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಬಸವಣ್ಣನವರು ತಮ್ಮ ಮನೆಯನ್ನು ಬಿಟ್ಟು ಹೊರಬಂದಿದ್ದು ಹೆಣ್ಣುಮಕ್ಕಳಿಗೆ ಸಮಾನತೆ ಸಿಗಲಿಲ್ಲವೆಂಬ ಕಾರಣಕ್ಕೆ. ಪ್ರಪಂಚದ ಮೊದಲ ಸಂಸತ್ ಅನುಭವ ಮಂಟಪವನ್ನು ತೆರೆದು ಸಮಾನತೆಯ ತತ್ವ ಸಿದ್ಧಾಂತವನ್ನು ತಂದರು. ಸರ್ವತೋಮುಖ ಅಭಿವೃದ್ಧಿಗೆ ಸಮಸಮಾಜದ ಕಲ್ಪನೆಯನ್ನು ತಂದರು. ಮಾನವೀಯತೆಯನ್ನು ಬಸವಣ್ಣನವರು ಹೇಳಿದರು.

ದಯವೇ ಧರ್ಮದ ಮೂಲವೆಂದರು. ಕಾಯಕ ದಾಸೋಹ ಸಿದ್ಧಾಂತಕ್ಕೆ ಹೆಚ್ಚಿನ ಮಹತ್ವ ನೀಡಿದರು. ಕಾಯಕದಲ್ಲಿ ಪ್ರಾಮಾಣಿಕತೆ, ನಿಷ್ಠೆ ಇರಬೇಕು ಎಂದರು. ಶಾಂತಿ ಹಾಗು ಪಾರದರ್ಶಕ ಆಡಳಿತಕ್ಕೆ ಒತ್ತು ಕೊಟ್ಟರು. ಶ್ರದ್ಧೆ ಇಲ್ಲದಿದ್ದರೆ ಯಾವ ಕೆಲಸವೂ ಪರಿಪೂರ್ಣ ಆಗುವುದಿಲ್ಲ ಎಂದು ಹೇಳಿದರು.

ರಾಹುಲ್‍ಗಾಂಧಿಯವರು ಶ್ರೀಮಠವನ್ನು ಸೌಜನ್ಯಯುತವಾಗಿ ಸಂದರ್ಶಿಸಿದರು. ಇಷ್ಟಲಿಂಗದ ಬಗ್ಗೆ ವಿಚಾರಿಸಿದ ರಾಹುಲ್‍ಗಾಂಧಿಯವರು ಶ್ರೀಗಳಿಗೆ ಕೆಲವು ಪ್ರಶ್ನೆ ಹಾಕಿದರು.

1) ನೀವು ಯಾವ ಸಿದ್ಧಾಂತ ಪ್ರಚುರಪಡಿಸುತ್ತೀರಿ.
ಸ್ವಾಮೀಜಿ – ನಮ್ಮದು ಬಸವತತ್ವ ಸಿದ್ಧಾಂತ.
2) ಬಸವಣ್ಣನವರು ಜಗತ್ತಿಗೆ ಏನನ್ನು ಬೋಧನೆ ಮಾಡಿದರು?
ಸ್ವಾಮೀಜಿ – ಬಸವಣ್ಣನವರು ಜಗತ್ತಿಗೆ ಕಾಯಕ, ಸಾಮಾಜಿಕ ಸಮಾನತೆ, ದಾಸೋಹ ಪರಿಕಲ್ಪನೆಯ ಮೂಲಕ ಮಾನವರೆಲ್ಲ ಒಂದು. ಮಾನವ ಪ್ರೀತಿ, ಜೀವ ಪ್ರೀತಿಯನ್ನು ಬಿತ್ತಿದರು.
3) ನೀವು ಯಾವ ಪೂಜೆ ಮಾಡುತ್ತೀರಿ?
ಸ್ವಾಮೀಜಿ – ನಾನು ಇಷ್ಟಲಿಂಗ ಪೂಜೆ ಮಾಡುತ್ತೇನೆ.
4) ಇಷ್ಟಲಿಂಗ ಪೂಜೆ ವಿಧಾನ ತಿಳಿಸಿಕೊಡುತ್ತೀರಾ?
ಸ್ವಾಮೀಜಿ, ಇಷ್ಟಲಿಂಗ ಪೂಜೆ (ಶಿವಯೋಗದ) ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಶ್ರೀಗಳು ಇಷ್ಟಲಿಂಗ ಧ್ಯಾನ ಮಾಡಿದುದನ್ನು ತದೇಕಚಿತ್ತದಿಂದ ಸುಮಾರು 25 ನಿಮಿಷಗಳ ಕಾಲ ಆಲಿಸಿದರು. ನಂತರ ಶ್ರೀಗಳು ಅವರಿಗೆ ವಿಭೂತಿಧಾರಣೆ ಮಾಡಿ ಲಿಂಗದೀಕ್ಷೆ ನೀಡಿ ಈಗ ನೀವು ಬಸವ ಭಕ್ತರಾಗಿದ್ದೀರಿ ಎಂದು ಸಂತಸಪಟ್ಟರು.

ನಂತರ ಮಾತನಾಡಿದ ರಾಹುಲ್‍ಗಾಂಧಿ, ನನಗೆ ಬಸವಣ್ಣನವರ ಬಗ್ಗೆ ಒಂದಿಷ್ಟು ಪರಿಚಯ ಇದೆ. ತಾವು ಯಾರನ್ನಾದರೂ ಕಳುಹಿಸಿದರೆ ಸಹಜ ಶಿವಯೋಗವನ್ನು ಕಲಿಯುತ್ತೇನೆ ಎಂದರು.
ನಂತರ ಶ್ರೀಗಳು ರಾಹುಲ್ ಗಾಂಧಿಯವರಿಗೆ ಬಸವಣ್ಣನವರ ಭಾವಚಿತ್ರ ನೀಡಿ ಶಾಲು ಹೊದಿಸಿ ಗೌರವಿಸಿದರು.

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಇದೊಂದು ಐತಿಹಾಸಿಕ ಮಠ. ಶ್ರೀಗಳಿಗೆ ಹೇಗೆ ದೀಕ್ಷೆ ಕೊಟ್ಟರೊ ಹಾಗೆ ರಾಹುಲ್ ಗಾಂಧಿಯವರಿಗೆ ಇಷ್ಟಲಿಂಗ ದೀಕ್ಷೆ ನೀಡಿದ್ದಾರೆ. ರಾಹುಲ್ ಗಾಂಧಿಯವರು ಈ ಮಠಕ್ಕೆ ಬರಬೇಕು ಎಂದು ಬಹಳ ದಿನದಿಂದ ಹೇಳುತ್ತಿದ್ದರು. ಅನೇಕ ಸಮುದಾಯದವರಿಗೆ ದೀಕ್ಷೆ ಕೊಟ್ಟಿರುವುದು ಅವರಿಗೆ ಖುಷಿ ಕೊಟ್ಟಿದೆ. ಸೋನಿಯಾಗಾಂಧಿ, ರಾಜೀವಗಾಂಧಿ ಅವರು ಈ ಮಠದ ಬಗ್ಗೆ ಪ್ರಸ್ತಾಪಿಸುತ್ತಿದ್ದರು. ನಮ್ಮ ಪಕ್ಷದಿಂದ ಶ್ರೀಮಠ ಮೊದಲಾಗಿ ಯಾವುದೇ ಮಠಗಳಿಗೆ ಯಾವುದೇ ಸಂದರ್ಭದಲ್ಲಿ ನೋಯಿಸಿರುವುದಿಲ್ಲ. ಇದು ನಮ್ಮ ತತ್ವಸಿದ್ಧಾಂತ. ಮುಂದೆ ಭಾರತ ಜೋಡೋ ಕಾರ್ಯಕ್ರಮ ಬರುವಾಗ ಎಲ್ಲರೂ ಅವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತೇವೆ. ಇದೊಂದು ಪವಿತ್ರವಾದ ಸಂದರ್ಭ. ಇದು ನಮ್ಮ ಭಾಗ್ಯ ಎಂದರು.

ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು ಮಾತನಾಡಿ, ನಾವೆಲ್ಲ ಸೇರಿ ಪರಿಶಿಷ್ಟ ಜಾತಿ ಮತ್ತು ಪಂಗಡದ 2 ಕೋಟಿ ಜನರಿಗೆ ಮೀಸಲಾತಿ ಸಿಗಬೇಕು ಎಂದರಲ್ಲದೆ, ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ನಮ್ಮ ಸಮುದಾಯಕ್ಕೆ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ಕೊಟ್ಟು ಸಾಮಾಜಿಕ ಸ್ಥಾನ ಒದಗಿಸಿದ್ದರು ಎಂದು ಸ್ಮರಿಸಿದರು.

ಮೂರುಸಾವಿರ ಮಠದ  ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿಗಳು ಮಾತನಾಡಿ, ರಾಹುಲ್‍ಗಾಂಧಿಯವರಿಗೆ ಇಷ್ಟಲಿಂಗ ದೀಕ್ಷೆ ಮಾಡಿದ್ದು ನನಗೆ ಅತೀವ ಸಂತಸ ತಂದಿದೆ. ಶ್ರೀಗಳವರದು ಮಾನವೀಯತೆಯ ಹೃದಯ. ಅವರ ವಿಶ್ವಮಾನ್ಯತತ್ವ ಅಸಾಮಾನ್ಯವಾದುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾವೇರಿ ಹೊಸಮಠದ ಶ್ರೀ ಬಸವ ಶಾಂತಲಿಂಗ ಸ್ವಾಮಿಗಳು, ಸವಣೂರು ದೊಡ್ಡಹುಣಸೇಮಠದ ಶ್ರೀ  ಚೆನ್ನಬಸವ ಸ್ವಾಮಿಗಳು, ಹೆಬ್ಬಾಳು ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಜಿಗಳು, ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮಿಗಳು, ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಗುರುಮುರುಘರಾಜೇಂದ್ರ ಸ್ವಾಮಿಗಳು, ದಾವಣಗೆರೆ ವಿರಕ್ತಮಠದ ಶ್ರೀ ಬಸವ ಪ್ರಭು ಸ್ವಾಮಿಗಳು, ಗಂಗಾವತಿ ಕಲ್ಮಠದ ಸ್ವಾಮಿಗಳು, ಸಂಗಮೇಶ್ವರ ಸ್ವಾಮಿಗಳು, ಅಕ್ಕಿಮಠದ ಗುರುಲಿಂಗ ಸ್ವಾಮಿಗಳು, ಮಾದಾರಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಜಿಗಳು, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮಿಗಳು, ಶ್ರೀ ಮರುಳಶಂಕರ ಸ್ವಾಮಿಗಳು, ತಿಳವಳ್ಳಿ ಕಲ್ಮಠದ ಶ್ರೀ ಬಸವ ನಿರಂಜನ ಸ್ವಾಮಿಗಳು, ಬ್ಯಾಡಗಿ ಮುಪ್ಪಿನಸ್ವಾಮಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮಿಗಳು, ಹಿರಿಯೂರು ಆದಿಜಾಂಬವ ಮಠದ ಶ್ರೀ ಷಡಕ್ಷರಮುನಿ ದೇಶೀಕೇಂದ್ರ ಸ್ವಾಮಿಗಳು, ಶರಣೆ ಮುಕ್ತಾಯಕ್ಕ, ಶರಣೆ ಅಕ್ಕನಾಗಮ್ಮ, ಶರಣೆ ಜಯದೇವಿ ತಾಯಿ, ಶರಣೆ ಚಿನ್ಮಯಿತಾಯಿ, ಶರಣೆ ರಾಜೇಶ್ವರಿ ತಾಯಿ ಸೇರಿದಂತೆ ಐವತ್ತುಕ್ಕು ಹೆಚ್ಚು ಸ್ವಾಮಿಗಳಿದ್ದರು.

ಪಕ್ಷದ ಮುಖಂಡರಾದ ವೇಣುಗೋಪಾಲ್, ರಘುಮೂರ್ತಿ, ಎಚ್. ಹನುಮಂತಪ್ಪ, ಬಿ.ಕೆ. ಹರಿಪ್ರಸಾದ್, ಈಶ್ವರ ಖಂಡ್ರೆ, ಜಿಲ್ಲಾಧ್ಯಕ್ಷ ತಾಜ್‍ಪೀರ್, ಸಲೀಂ ಅಹಮದ್, ಬಿ.ಎನ್. ಚಂದ್ರಪ್ಪ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!