ಪುನಿತ್‍ರಾಜ್‍ಕುಮಾರ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಿರುವ ಡಾ.ಶಿವಮೂರ್ತಿ ಶರಣರಿಗೆ ಅಪ್ಪು ಅಭಿಮಾನಿಗಳ ಬಳಗದಿಂದ ಗೌರವ ಸಮರ್ಪಣೆ

suddionenews
0 Min Read

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ನ.08) : ಅದ್ಬುತವಾದ ನಟನೆಯ ಮೂಲಕ ಚಿಕ್ಕವಯಸ್ಸಿನಲ್ಲೆ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಪವರ್‍ಸ್ಟಾರ್ ಪುನಿತ್‍ರಾಜ್‍ಕುಮಾರ್‍ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಿರುವ ಮುರುಘಾಮಠದ ಡಾ.ಶಿವಮೂರ್ತಿ ಶರಣರನ್ನು ಅಪ್ಪು ಅಭಿಮಾನಿಗಳ ಬಳಗದಿಂದ ಗೌರವಿಸಲಾಯಿತು.

ಅಪ್ಪು ಅಭಿಮಾನಿ ಬಳಗದ ಗೌರವಾಧ್ಯಕ್ಷ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾಧ್ಯಕ್ಷ ಮೋಹನ್ ಅಪ್ಪು, ತಾಲ್ಲೂಕು ಅಧ್ಯಕ್ಷ ಕೃಷ್ಣ, ಅಪ್ಪು ಅಭಿಮಾನಿಗಳಾದ ಹುಚ್ಚವ್ವನಹಳ್ಳಿ ಪ್ರಸನ್ನ, ವೀರೇಶ, ಕ್ರಾಂತಿಕುಮಾರ್, ಮೆದೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ್ ಗೊಪ್ಪೆ, ಗಿರೀಶ್, ನ್ಯಾಯವಾದಿ ಉಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *