ಸುದ್ದಿಒನ್, ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನೀಡಲಾಗುವ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳ ಪೈಕಿ ಈ ಭಾರಿ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸ್ವಾಮೀಜಿಗಳ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಪರಿಸರ ಕಾಳಜಿ, ಯುವಜನ ಸಬಲೀಕರಣ, ಸಮಸಮಾಜದ ನಿರ್ಮಾಣ ಹಾಗೂ ರಾಷ್ಟ್ರೀಯತೆಯ ಸೇವಾ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಪ್ರತಿಷ್ಠಾನ ತಿಳಿಸಿದೆ. ಈ ಸಂಬಂಧ ಪ್ರತಿಷ್ಠಾನದ ಪದಾಧಿಕಾರಿಗಳು ಸ್ವಾಮೀಜಿಯವರನ್ನು ಚಿತ್ರದುರ್ಗದ ಶ್ರೀಮಠದಲ್ಲಿ ಭೇಟಿ ನೀಡಿ ಅಧಿಕೃತ ಆಹ್ವಾನ ನೀಡಿ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸುವಂತೆ ಮನವಿ ಮಾಡಿದರು.
ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಸಮಾಜದಲ್ಲಿ ಬೆಳೆಸುವ ಉದ್ದೇಶದಿಂದ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸುವ ಸಂಪ್ರದಾಯವನ್ನು
ಕೆಂಪೇಗೌಡ ಪ್ರತಿಷ್ಠಾನ ರೂಡಿಸಿಕೊಂಡು ಬರುತ್ತಿದೆ. ಈ ಸಾಲಿನಲ್ಲಿ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಆಯ್ಕೆ ಭಕ್ತರು ಹಾಗೂ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ನಾಡಪ್ರಭು ಕೆಂಪೇಗೌಡರ 517 ನೇ ಜನ್ಮ ಜಯಂತಿ ಪ್ರಯುಕ್ತ ಜೂನ್ 27 ರಂದು ಶನಿವಾರ ಬೆಂಗಳೂರಿನ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಪ್ರಶಸ್ತಿ ನೀಡಿ ಗೌರವಿಸುವರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










