ಈಡಿಗ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಸುವಂತೆ ಡಾ. ಶ್ರೀ. ಶ್ರೀ. ಶ್ರೀ. ಪ್ರಣವಾನಂದ ಸ್ವಾಮೀಜಿ ಆಗ್ರಹ

suddionenews
2 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜೂ.26) : ಹಿಂದಿನ ಸರ್ಕಾರ ಆದೇಶ ಮಾಡಿದ್ದ ಕುಲಶಾಸ್ತ್ರ ಅಧ್ಯಯನವನ್ನು ಕೂಡಲೇ ಪ್ರಾರಂಭ ಮಾಡಬೇಕು ಹಾಗೂ ಈಡಿಗ ಸಮಾಜವನ್ನು ಎಸ್. ಟಿ (ST) ಮೀಸಲಾತಿಗೆ ಸೇರಿಸುವುದಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕುಲಕಸುಬು ಸೇಂದಿ ಹಾಗೂ ನೀರಾ ವಿಷಯದಲ್ಲಿ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕು.

ಬ್ರಹ್ಮಶ್ರೀ ನಾರಾಯಣ ಗುರು ಪುತ್ತಳಿಯನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಸ್ಥಾಪಿಸಬೇಕು ಎಂದು ಸರ್ಕಾರವನ್ನು ರಾಷ್ಟ್ರೀಯ ಈಡಿಗ ಮಹಾ ಮಂಡಳಿ ಕರ್ನಾಟಕ ರಾಷ್ಟ್ರೀಯ ಈಡಿಗ ಬಿಲ್ಲವ ಮಹಾಮಂಡಳಿ ರಾಷ್ಟ್ರೀಯ ಈಡಿಗ ದೀವರ ಮಹಾಮಂಡಳಿ ರಾಷ್ಟ್ರೀಯ ಈಡಿಗ ನಾಮಧಾರಿ ಮಹಾಮಂಡಳಿಯ ಡಾ. ಶ್ರೀ. ಶ್ರೀ. ಶ್ರೀ. ಪ್ರಣವಾನಂದ ಸ್ವಾಮೀಜಿಯವರು ಆಗ್ರಹಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ನಿಗಮಕ್ಕೆ ವರ್ಷಕ್ಕೆ 250 ಕೋಟಿ ನೀಡುವುದಾಗಿ ಹೇಳಿರುವುದು ಕೂಡಲೇ ಜಾರಿಗೆ ತರಬೇಕು. ನಂತರ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ನಿಗಮಕ್ಕೆ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರು ಹೆಸರಿನಲ್ಲಿ ನಮ್ಮ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ಕೇಂದ್ರಗಳನ್ನು ಉತ್ತರ ಕನ್ನಡ ಹಾಗೂ ಮಂಗಳೂರು ಜಿಲ್ಲೆಯಲ್ಲಿ ಪ್ರಾರಂಭಿಸಬೇಕು.12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಗುರುತಿಸಿಕೊಂಡಿರುವ ನಮ್ಮ ಸಮುದಾಯದ ಶ್ರೀ ಹೆಂಡದ ಮಾರಯ್ಯನವರ ಜಯಂತಿಯನ್ನು ಆಚರಣೆ ಮಾಡಬೇಕು.

ಈಡಿಗ ಸಮುದಾಯದ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹಿಂದಿನ ಸರ್ಕಾರ ನೀಡಿದ ಕಾನೂನು ಗೊಂದಲಗಳನ್ನು ದೂರ ಮಾಡಿ ದೇವಸ್ಥಾನವನ್ನು ಧರ್ಮದರ್ಶಿಗಳಾದ ಡಾ. ಶ್ರೀ ರಾಮಪ್ಪನವರ ನೇತೃತ್ವದಲ್ಲಿ ಸುಸೂತ್ರವಾಗಿ ನಡೆಸಲು ಅವಕಾಶ ಮಾಡಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿಯೂ ನಾರಾಯಣ ಗುರುಗಳ ಸಿದ್ಧಾಂತಗಳನ್ನು ಬೋಧಿಸಲು ಪಠ್ಯದಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಲಾಯಿತು.

ಸರ್ಕಾರಿ ಜಾಗದಲ್ಲಿ ಈಚಲು, ತಾಳೆ,ಬೈನ ಹಾಗೂ ತೆಂಗಿನ ಮರಗಳನ್ನು ಸರ್ಕಾರದ ಖರ್ಚಿನಲ್ಲಿ ಬೆಳಸಿ ಸಮುದಾಯದ ಮಕ್ಕಳಿಗೆ ಸ್ವಉದ್ಯೋಗ ಮಾಡಲು ಅವಕಾಶ ಮಾಡಿಕೊಡಬೇಕು. ಸಮಾಜದ ಸಂಘಟನ ದೃಷ್ಟಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕುಲಬಾಂಧವರ ಚಿಂತನ ಶಿಬಿರ ಮಾಡುವುದು ಹಾಗೂ ಸಾಮಾಜಿಕ ಮತ್ತು ರಾಜಕೀಯದ ಅರಿವನ್ನು ಮೂಡಿಸಲಾಗುವುದು.

ಭ್ರಷ್ಟಾಚಾರ ರಹಿತ ರಾಜಕಾರಣಿಯಾಗಿರುವ  ಬಿ. ಕೆ. ಹರಿಪ್ರಸಾದ್ ರವರನ್ನು ಕಾಂಗ್ರೆಸ್ ಪಕ್ಷ ಕಡೆಗನಿಸಿರುವುದು ಸಮುದಾಯ ಸಹಿಸುವುದಿಲ್ಲ ಆದರಿಂದ ಕೂಡಲೇ ಬಿ.ಕೆ. ಹರಿಪ್ರಸಾದ್ ರವರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಬೇಕೆಂದು ಒತ್ತಾಯಿಸಲಾಯಿತು.

ಸಮುದಾಯದ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದೆ. ಹಿಂದಿನ ಸರ್ಕಾರ ಕೆಲವೊಂದು ಬೇಡಿಕೆಗಳನ್ನು ಒಂದು ನೆಪಕ್ಕೆ ಈಡೇರಿಸಿದ್ದಾರೆ ಆದರೆ ಯಾವುದು ಕಾರ್ಯರೂಪಕ್ಕೆ ಬರಲಿಲ್ಲವೆಂದು ಕಂಡುಬಂದಿದೆ ಆದರಿಂದ ನೂತನ ಕಾಂಗ್ರೆಸ್ ಸರ್ಕಾರದ ಮೇಲೆ ಸಮಾಜಕ್ಕೆ ನಿರೀಕ್ಷೆಯಿದೆ. ಈ ಸರ್ಕಾರವೂ ಕೂಡ ವಿಳಂಬ ಹಾಗೂ ಅಲಕ್ಷ್ಯ ಮಾಡಿದರೆ ಬೀದಿಗೆ ಇಳಿಯುವುದು ಹಾಗೂ ಉಗ್ರ ಹೋರಾಟ ಮಾಡುವುದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಯಿತು.

ಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಶ್ರೀಮತಿ ಗಾಯತ್ರಿ, ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ತಿಪ್ಪೇಶ್, ರಾಜ್ಯ ಸಂಘಟನಾ ಕಾರ್ಯದರ್ಶೀ ರಾಘವೇಂದ್ರ ನಾಯ್ಕ್, ರಾಜ್ಯ ಕಾರ್ಯದರ್ಶಿ ನಂದೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮನು, ಸೇರಿದಂತೆ ಇತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *