Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಡಾ. ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ ಅವಿರೋಧ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 03 : ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಟ್ರಸ್ಟ್‌ನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ಡಾ. ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಮಂಗಳವಾರ ನಡೆದ ಟ್ರಸ್ಟ್ ನ ವಿಶೇಷ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷರಾದ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಎಸ್. ಕೆ. ಬಸವರಾಜನ್, ಖಜಾಂಚಿ ಡಾ. ಜಿ ಎನ್ ಮಲ್ಲಿಕಾರ್ಜುನಪ್ಪ,ವಿಶ್ವಸ್ತ ಮಂಡಳಿಯ ಸದಸ್ಯರಾದ ಪ್ರಕಾಶ್, ಕೆಂಗುಂಟೆ ಜಯಪ್ಪ, ಸೊಂಡೆಕೊಳ ಶ್ರೀನಿವಾಸ್, ರಾಮದಾಸ್,ರವಿಕುಮಾರ್, ರಾಜಪ್ಪ,
ಶ್ರೀಕಂಠಮೂರ್ತಿ,ಎಲ್ ಎಸ್ ಶಿವರಾಮಯ್ಯ, ದ್ಯಾಮಣ್ಣ ಪಾಲ್ಗೊಂಡು ಸ್ವಾಮೀಜಿಯವರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ
ಸರ್ವಾನುಮತದಿಂದ ಆಯ್ಕೆ ಮಾಡಿದರು.

ನಂತರ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಆವರಣದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮೀಜಿ, ಹಾಗೂ ಸೂರ್ ದಾಸ್ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಶಾಲೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿಯವರು ಕುಗ್ರಾಮವಾದ ಮಲ್ಲಾಡಿಹಳ್ಳಿಯನ್ನು ಗುರಿತಿಸಿದ ರಾಘವೇಂದ್ರ ಸ್ವಾಮೀಜಿಯವರು ತಮ್ಮ ಅವಿರತ ಸೇವೆಯ ಮೂಲಕ ಮತ್ತು ಶಿಕ್ಷಣ ಸಂಸ್ಕಾರದ ಕ್ರಾಂತಿಯ ಈ ಗ್ರಾಮವನ್ನು ದೇಶದ ಗಮನ ಸೆಳೆಯುವಂತೆ ಮಾಡಿದರು. ಅವರ ಶ್ರಮ ವ್ಯರ್ಥ ವಾಗದಂತೆ ನಡೆದುಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment