Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

---Advertisement---

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನವು ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆದೇಶದ ಮೇರೆಗೆ ಈ ಮಹತ್ವದ ಸಾಂವಿಧಾನಿಕ ನೇಮಕಾತಿ ನಡೆದಿದೆ. ಇದರೊಂದಿಗೆ ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗುತ್ತಿದ್ದು, ಪ್ರಸ್ತುತ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದೆ.

ರಾಷ್ಟ್ರಪತಿ ಭವನ ಹೊರಡಿಸಿರುವ ಆದೇಶದ ಅನ್ವಯ ಕರ್ನಾಟಕ ಮಾತ್ರವಲ್ಲದೆ ದೇಶದ ಹಲವು ರಾಜ್ಯಗಳ ರಾಜ್ಯಪಾಲರನ್ನು ನೇಮಕ ಹಾಗೂ ವರ್ಗಾವಣೆ ಮಾಡಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ಹಾಗೂ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡು ರಾಜ್ಯಪಾಲರನ್ನಾಗಿ ನಿಯೋಜಿಸಲಾಗಿದೆ. ಇದರ ಜತೆಗೆ ಬ್ರಜ್ ಮೋಹನ್ ರಾಮ್ ಒಡಿಶಾ ರಾಜ್ಯಪಾಲರಾಗಿ, ಡಾ. ಧಾಲ್ ಸಿಂಗ್ ಬಿಸೆನ್ ಉತ್ತರಾಖಂಡದ ರಾಜ್ಯಪಾಲರಾಗಿ ಹಾಗೂ ದುಷ್ಯಂತ್ ಗೌತಮ್ ಅವರು ಸಿಕ್ಕಿಂ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ನೂತನವಾಗಿ ನೇಮಕಗೊಂಡಿರುವ ಎಲ್ಲಾ ರಾಜ್ಯಪಾಲರು ತಮ್ಮ ತಮ್ಮ ಕಚೇರಿಗಳ ಅಧಿಕಾರ ವಹಿಸಿಕೊಂಡ ದಿನದಿಂದಲೇ ಈ ಆದೇಶವು ಜಾರಿಗೆ ಬರಲಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಿರುವ ಡಾ. ಸುಧಾ ಯಾದವ್ ಅವರು ಶೀಘ್ರದಲ್ಲೇ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Join WhatsApp

Join Now

Join Telegram

Join Now