ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ನಟ ಡಾ.ವಿಷ್ಣುವರ್ಧನ್ ಹಾಗೂ ಪಂಚಭಾಷಾ ತಾರೆ ಬಿ.ಸರೋಜದೇವಿ ಇವರುಗಳಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದಕ್ಕೆ ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್‍ರವರ ಆದರ್ಶ ಬಳಗದ ವತಿಯಿಂದ ತುರುವನೂರು ರಸ್ತೆಯಲ್ಲಿರುವ ಡಾ.ವಿಷ್ಣುವರ್ಧನ್ ಪಾರ್ಕ್‍ನಲ್ಲಿ ಗುರುವಾರ ರಾತ್ರಿ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದರು.
ನಾಗರಹಾವು ಚಿತ್ರದ ಮೂಲಕ ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿದ ಡಾ.ವಿಷ್ಣುವರ್ಧನ್‍ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಅವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದ್ದು, ಅಭಿಮಾನಿಗಳಲ್ಲಿ ಅತೀವ ಸಂತಸವುಂಟಾಗಿದೆ ಎಂದು ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಆದರ್ಶ ಬಳಗದ ರಾಜ್ಯಾಧ್ಯಕ್ಷ ಸಿ.ಕೆ.ಗೌಸ್‍ಪೀರ್ ಹೇಳಿದರು.
ಹೇಮಂತ್‍ರಾಜ್, ರಘುವಿಷ್ಣು, ಲಯನ್‍ಬಾಬು, ರಾಜೇಶ್, ಲಕ್ಷ್ಮಣ್, ಅಜಯ್, ರಾಜು, ವೈಭವ್ ಹಾಗೂ ಪುಟಾಣಿಗಳಾದ ಖುಷಿ, ವಿಷ್ಣು, ರಿದ್ವಿನ್ ಇವರುಗಳು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












