ಸುದ್ದಿಒನ್,ಬೆಂಗಳೂರು,ಜೂನ್.03: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ಇಂದು ಅಧಿಕೃತ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಸೇರ್ಪಡೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.
ಪ್ರಮಾಣವಚನ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಜೊತೆಗೆ ಸಂಪುಟಕ್ಕೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಸಿದ್ದರಾಮಯ್ಯ ಅವರ ರಾಜಕೀಯ ಪರಂಪರೆಯ ಮುಂದುವರಿದ ನಾಯಕರೆಂದು ಗುರುತಿಸಿಕೊಂಡಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸರ್ಕಾರದಲ್ಲಿ ಯಾವ ಮಹತ್ವದ ಸಚಿವ ಸ್ಥಾನ ನೀಡಲಾಗುತ್ತದೆ ಎಂಬುದರ ಬಗ್ಗೆ ಈಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಖಾತೆ ಹಂಚಿಕೆ ಕುರಿತ ನಿರ್ಧಾರಕ್ಕೆ ಎಲ್ಲರ ಕಣ್ಣು ನೆಟ್ಟಿದೆ.
ಇಂದು ಕರ್ನಾಟಕ ರಾಜ್ಯ ಸಂಪುಟ ದರ್ಜೆಯ ಸಚಿವರಾಗಿ ಭಾರತದ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದೆ.
1/2 pic.twitter.com/e37m5Vc7g1— Dr Yathindra Siddaramaiah (@Dr_Yathindra_S) June 3, 2026
ಜನಸೇವೆ ಮಾಡಲು ಅವಕಾಶ ಕಲ್ಪಿಸಿದ ಕಾಂಗ್ರೆಸ್ ಪಕ್ಷಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು.
2/2 pic.twitter.com/N1rCS7sGS6— Dr Yathindra Siddaramaiah (@Dr_Yathindra_S) June 3, 2026

















