Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ನೀರು ಹರಿಸಿ, ಬೆಳೆ ಉಳಿಸಿ’ – ಜಿಲ್ಲಾಡಳಿತಕ್ಕೆ ಸಂದೀಪ್ ಗುಂಡಾರ್ಪಿ ತುರ್ತು ಮನವಿ

---Advertisement---

ಸುದ್ದಿಒನ್, ಹಿರಿಯೂರು, ಜು.30: ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದು ಬೋರ್‌ವೆಲ್‌ಗಳು ಬತ್ತುತ್ತಿರುವ ಹಿನ್ನೆಲೆಯಲ್ಲಿ ವಾಣಿ ವಿಲಾಸ ಸಾಗರ (ವಿ.ವಿ. ಸಾಗರ) ಜಲಾಶಯದಿಂದ ಎರಡನೇ ಕಂತಿನ ನೀರನ್ನು ತುರ್ತಾಗಿ ಎಡ ಮತ್ತು ಬಲ ಮುಖ್ಯ ಕಾಲುವೆಗಳ ಮೂಲಕ ಹರಿಸುವಂತೆ ಅಚ್ಚುಕಟ್ಟು ಪ್ರದೇಶದ ರೈತರು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಹಿರಿಯೂರು ತಾಲ್ಲೂಕು ಘಟಕದ ವತಿಯಿಂದ ಸಲ್ಲಿಸಲಾದ ಮನವಿಯಲ್ಲಿ, ತೆಂಗು, ಅಡಿಕೆ, ಬಾಳೆ, ಪಪ್ಪಾಯಿ, ದಾಳಿಂಬೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ಹಾಗೂ ಅಲ್ಪಾವಧಿ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಲಾಗಿದೆ. ಸಕಾಲದಲ್ಲಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ ತೀವವಾಗಿ ಕುಸಿದಿದ್ದು, ಬಹುತೇಕ ಬೋರ್‌ವೆಲ್‌ ಗಳಲ್ಲಿ ನೀರು ಬತ್ತಿದೆ. ಆದ್ದರಿಂದ ಬೆಳೆಗಳನ್ನು ಉಳಿಸಲು ಜಲಾಶಯದಿಂದ ತಕ್ಷಣ ನೀರು ಹರಿಸುವ ಅಗತ್ಯವಿದೆ ಎಂದು ರೈತರು ಮನವಿ ಮಾಡಿದ್ದಾರೆ.

ಈ ಸಂಬಂಧ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು 2026-27ನೇ ಸಾಲಿನ ಎರಡನೇ ಕಂತಿನ ನೀರನ್ನು ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಹರಿಸುವ ಅಗತ್ಯವಿದೆ ಎಂದು ವರದಿ ಸಲ್ಲಿಸಿದ್ದಾರೆ.

ದಿನಾಂಕ 24 ಜುಲೈ 2026ರ ಲೆಕ್ಕಾಚಾರದಂತೆ ವಾಣಿ ವಿಲಾಸ ಸಾಗರ ಜಲಾಶಯದಲ್ಲಿ ಬಳಕೆಗೆ 21.681 ಟಿ.ಎಂ.ಸಿ. ನೀರು ಲಭ್ಯವಿದೆ. ಹಿರಿಯೂರು, ಚಿತ್ರದುರ್ಗ ಹಾಗೂ ಚಳ್ಳಕೆರೆ ಪಟ್ಟಣಗಳು, ಸಂಶೋಧನಾ ಕೇಂದ್ರಗಳು ಮತ್ತು 18 ಗ್ರಾಮಗಳ ಕುಡಿಯುವ ನೀರಿಗೆ ಸುಮಾರು 0.141 ಟಿ.ಎಂ.ಸಿ., ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ 30 ದಿನಗಳ ಕಾಲ ಒಂದು ಹದದ ನೀರು ಹರಿಸಲು ಸುಮಾರು 1.50 ಟಿ.ಎಂ.ಸಿ., ಅಕ್ಟೋಬರ್ ಅಂತ್ಯದವರೆಗೆ ಆವಿಯಾಗುವ ನೀರಿಗೆ ಸುಮಾರು 0.344 ໖.໑໐.. 1.985 ໖.໑໐.. ಅಂದಾಜಿಸಲಾಗಿದೆ. ಇದಾದ ನಂತರವೂ ಜಲಾಶಯದಲ್ಲಿ ಸುಮಾರು 19.696 ಟಿ.ಎಂ.ಸಿ. ನೀರು ಉಳಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ 2026-27ನೇ ಸಾಲಿನ ಎರಡನೇ ಕಂತಿನ ನೀರನ್ನು ಅಚ್ಚುಕಟ್ಟು ಪ್ರದೇಶಕ್ಕೆ ಹರಿಸುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲು ವಾಣಿ ವಿಲಾಸ ಸಾಗರ ನೀರಾವರಿ ಸಲಹಾ ಸಮಿತಿ ಸಭೆಯನ್ನು ಶೀಘ್ರದಲ್ಲಿ ಕರೆಯುವಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ.

ಪ್ರಸ್ತುತ ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕುಗಳಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದೆ. ಪರಿಣಾಮವಾಗಿ, ರೈತರು ಕೊರೆಸಿರುವ ಅನೇಕ ಬೋ‌ರವೆಲ್‌ ಗಳಲ್ಲಿಯೂ ನೀರು ಬತ್ತುತ್ತಿರುವ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ವಾಣಿ ವಿಲಾಸ ಸಾಗರ ಜಲಾಶಯದಿಂದ ತಕ್ಷಣ ಕಾಲುವೆಗಳಿಗೆ ನೀರು ಹರಿಸಿದರೆ ಅಚ್ಚುಕಟ್ಟು ಪ್ರದೇಶದಲ್ಲಿರುವ ತೆಂಗು, ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಹಾಗೂ ಇತರೆ ಬೆಳೆಗಳನ್ನು ಸಂರಕ್ಷಿಸಲು ನೆರವಾಗುವುದರ ಜೊತೆಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಲಭ್ಯತೆಯೂ ಸುಧಾರಿಸಲಿದೆ ಎಂದು ಚಿತ್ರದುರ್ಗ ಜಿಲ್ಲೆಯ ಯುವ ಮುಖಂಡ ಹಾಗೂ ಉದ್ಯಮಿ ಶ್ರೀ. ಸಂದೀಪ್ ಗುಂಡಾರ್ಪಿ ಸೇರಿದಂತೆ ವಿವಿಧ ರೈತ ಸಂಘಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now