Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರದೋಷ್‌ ಹೇಳಿಕೆ ವೇಳೆ ಕೋರ್ಟ್‌ನಲ್ಲಿ ಹೈಡ್ರಾಮಾ; ದರ್ಶನ್‌ ಪರ ವಕೀಲರಿಂದ ಗಂಭೀರ ಆಕ್ಷೇಪ

---Advertisement---

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮತ್ತೊಂದು ಹಂತ ತಲುಪಿದ್ದು, ಮಾಫಿ ಸಾಕ್ಷಿಯಾಗಿರುವ 14ನೇ ಆರೋಪಿ ಪ್ರದೋಷ್‌ ಅವರ ಹೇಳಿಕೆ ಎರಡನೇ ದಿನವೂ ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ ಮುಂದುವರಿದಿದೆ. ಸೆಪ್ಟೆಂಬರ್‌ 28ರಂದು ಸುಮಾರು ಮೂರು ಗಂಟೆಗಳ ಕಾಲ ಪ್ರದೋಷ್‌ ಹೇಳಿಕೆ ದಾಖಲಿಸಿದ್ದರು. ಸೆಪ್ಟೆಂಬರ್‌ 29ರಂದು ವಿಚಾರಣೆ ಆರಂಭವಾಗುತ್ತಿದ್ದಂತೆ ದರ್ಶನ್‌ ಪರ ಹಿರಿಯ ವಕೀಲ ಹಷ್ಮತ್‌ ಪಾಷಾ ಅವರು ಪ್ರದೋಷ್‌ ಅವರ ಸಾಕ್ಷ್ಯ ದಾಖಲಿಸುವ ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಪ್ರದೋಷ್‌ ಮಾಫಿ ಸಾಕ್ಷಿಯಾಗಿ ಬದಲಾಗಿರುವ ಹಿನ್ನೆಲೆಯಲ್ಲಿ ಅವರೊಂದಿಗೆ ವಕೀಲರು ಕೋರ್ಟ್‌ ಆವರಣದಲ್ಲಿ ಮಾತುಕತೆ ನಡೆಸಿರುವ ವಿಚಾರವನ್ನು ಪ್ರಸ್ತಾಪಿಸಿ, ಇಂತಹ ಸಂಭಾಷಣೆಗಳಿಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಇದೇ ವೇಳೆ, ಜೈಲಿನಲ್ಲಿರುವ ಆರೋಪಿಗಳಿಗೆ ಕುಟುಂಬಸ್ಥರೊಂದಿಗೆ ಫೋನ್‌ನಲ್ಲಿ ಮಾತನಾಡಲು ಅವಕಾಶ ನೀಡುವಂತೆ ಸಲ್ಲಿಸಲಾದ ಮನವಿಗೆ ನ್ಯಾಯಾಲಯ ಸ್ಪಂದಿಸಿದ್ದು, ಈ ಕುರಿತು ಜೈಲು ಅಧಿಕಾರಿಗಳಿಗೆ ಪ್ರತ್ಯೇಕ ಮನವಿ ಸಲ್ಲಿಸುವಂತೆ ಸೂಚಿಸಿದೆ. ಸೋಮವಾರದ ವಿಚಾರಣೆಗೆ ಸಂಬಂಧಿಸಿದ ಕೆಲವು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವನ್ನು ವಕೀಲ ರಂಗನಾಥ್‌ ರೆಡ್ಡಿ ಅವರು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಪ್ರದೋಷ್‌ ಅವರ ಸಾಕ್ಷ್ಯ ದಾಖಲಿಸುವ ಪ್ರಕ್ರಿಯೆಯನ್ನು ಸೂಕ್ಷ್ಮ ವಿಚಾರವಾಗಿ ಪರಿಗಣಿಸಿ, ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ಹೊರತುಪಡಿಸಿ ಇತರರನ್ನು ಕೋರ್ಟ್‌ ಹಾಲ್‌ನಿಂದ ಹೊರಗೆ ಕಳುಹಿಸಿ ವಿಚಾರಣೆ ಮುಂದುವರಿಸಿತು.

ನ್ಯಾಯಾಲಯದ ಕಲಾಪಗಳನ್ನು ವಿಡಿಯೋ ರೆಕಾರ್ಡ್‌ ಮಾಡುವುದು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದನ್ನು ಮಾಡಬಾರದು ಎಂದು ಪೀಠ ಎಚ್ಚರಿಕೆ ನೀಡಿತು.ಪ್ರದೋಷ್‌ ಅವರು ಸತ್ಯವನ್ನಷ್ಟೇ ಹೇಳುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿಯಿತು. ಮಾಫಿ ಸಾಕ್ಷಿಯಾಗಿ ಪ್ರದೋಷ್‌ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಸೆಪ್ಟೆಂಬರ್‌ 28ರಿಂದ ಆರಂಭವಾಗಿದ್ದು, ಎರಡನೇ ದಿನವೂ ಮುಂದುವರಿದಿದೆ.

ಇದಕ್ಕೂ ಮುನ್ನ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರದಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿ, ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now