ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಹಿರಿಯೂರು : ಎಷ್ಟೋ ಹಳ್ಳಿಗಳಲ್ಲಿ ಈಗಲೂ ಮೂಲಭೂತ ಸೌಕರ್ಯಕ್ಕೆ ಕೊರತೆ ಇದೆ. ಆದರೆ ಜನಪ್ರತಿನಿಧಿಗಳು ಮಾತ್ರ ಅತ್ತಕಡೆ ಗಮನ ಹರಿಸುವುದೇ ಇಲ್ಲ. ಚುನಾವಣೆಯ ಹೊಸ್ತಿಲಲ್ಲಿ ಮಾತ್ರ ಜನರ ಮುಂದೆ ಬಂದು ಭರವಸೆಗಳನ್ನ ನೀಡಿ ಹೋಗುತ್ತಾರೆ. ಇದೀಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ತೆರಳಿದ ಸಂದರ್ಭದಲ್ಲಿ ಸಚುವ ಸುಧಾಕರ್ ಅವರಿಗೆ ದಿಂಡವರ ಗ್ರಾಮದ ಜನ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.
ತಾಲೂಕಿನ ದಿಂಡವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆ ಸಮಸ್ಯೆಯನ್ನು ಬಗೆಹರಿಸದೆ ಈಗ ಚುನಾವಣೆಯ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಮತಯಾಚನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಸಚಿವರು ಗ್ರಾಮದೊಳಗೆ ಬರುತ್ತಿದ್ದಂತೆಯೇ ಸಚಿವರ ಕಾರಿಗೆ ಗ್ರಾಮಸ್ಥರು ಕಾರಿಗೆ ಅಡ್ಡಲಾಗಿ ಮಲಗಿ ನೇರವಾಗಿ ವಾಪಾಸ್ ಕಳಿಸಿರುವ ಘಟನೆ ನಡೆದಿದೆ.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಚಿವರು ಗಮನ ಹರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗಷ್ಟೇ ಗ್ರಾಮದಲ್ಲಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ದಿಂಡವಾರ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ನೀರು ಪೂರೈಕೆ ಮಾಡದಿದ್ದರೆ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇಷ್ಟಾದರೂ ಬಳಿಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ. ಶುಕ್ರವಾರ ಸಚಿವ ಡಿ ಸುಧಾಕರ್ ಅವರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಅವರ ಪರವಾಗಿ ಮತಯಾಚನೆ ಮಾಡಲು ಗ್ರಾಮಕ್ಕೆ ತೆರಳುತ್ತಿದ್ದಂತೆಯೇ ಗ್ರಾಮದ ಮಹಿಳೆಯರು, ಪುರುಷರು, ಮಕ್ಕಳು ಸಚಿವರ ಕಾರಿಗೆ ಅಡ್ಡ ಮಲಗಿ, ಮುತ್ತಿಗೆ ಹಾಕಿದ್ದಾರಲ್ಲದೆ, ಸಚಿವರಿಗೆ ಘೇರಾವ್ ಹಾಕಿ ವಾಪಸ್ ಕಳುಹಿಸಿದ್ದಾರೆ. ಸಚಿವರು ಕಾರಿನಿಂದ ಇಳಿದು ಮಾತನಾಡಲು ಗ್ರಾಮಸ್ಥರು ಅವಕಾಶ ಕೊಟ್ಟಿಲ್ಲ. ಪ್ರತಿಭಟನೆ ಕಾವು ರಂಗೇರುತ್ತಿದ್ದಂತೆಯೇ ಸಚಿವರು ಕಾರು ಇಳಿಯದೇ ಬಂದ ದಾರಿಗೆ ಸುಂಕ ಇಲ್ಲಂತೆ ವಾಪಸ್ ತೆರಳಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್