ಚಿತ್ರದುರ್ಗ. ಫೆಬ್ರವರಿ .21: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸಲು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದೆ.
2023-24ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಘೋಷಿಸಿದ್ದು, ಬರಪೀಡಿತ ತಾಲ್ಲೂಕು ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪನೆಗೊಂಡಿರುವ ಸಹಾಯವಾಣಿ
08194-222538, ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416, ಚಳ್ಳಕೆರೆ ತಾಲ್ಲೂಕು ಕಚೇರಿ 08195-250648, ಹಿರಿಯೂರು ತಾಲ್ಲೂಕು ಕಚೇರಿ 08193-263226, ಹೊಸದುರ್ಗ ತಾಲ್ಲೂಕು ಕಚೇರಿ 08199-295058, ಹೊಳಲ್ಕೆರೆ ತಾಲ್ಲೂಕು ಕಚೇರಿ 08191-200013 ಹಾಗೂ ಮೊಳಕಾಲ್ಮುರು ತಾಲ್ಲೂಕು ಕಚೇರಿ 08198-229234 ಸಹಾಯವಾಣಿ ಮೂಲಕ ತಮ್ಮ ಸಮಸ್ಯೆಗಳನ್ನು ದಾಖಲಿಸಬಹುದಾಗಿರುತ್ತದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…