ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

 

 

ಚಿತ್ರದುರ್ಗ. ಫೆ.11: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ ನೀಡಲಾಯಿತು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳು, ಕಾರ್ಯಕ್ರಮಗಳನ್ನು ಎಲ್‍ಇಡಿ ಪರದೆ ಮೂಲಕ ಸಂಚಾರಿ ವಾಹನದಲ್ಲಿ ಪ್ರದರ್ಶನ ನೀಡುವ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಿದೆ.

ಪ್ರದರ್ಶನ ವಾಹನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಅವರು, ಜನರ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರನ್ನು ತಲುಪುತ್ತಿವೆ.  ಯೋಜನೆಗಳ ಸದುಪಯೋಗವನ್ನು ಪಡೆಯುತ್ತಿರುವ ಸಾರ್ವಜನಿಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.  ಯೋಜನೆಗಳ ಬಗ್ಗೆ ವ್ಯಾಪಕವಾಗಿ ಪ್ರಚಾರ ಮಾಡಲು ವಾರ್ತಾ ಇಲಾಖೆಯು ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಪ್ರಚಾರದ ಎಲ್‍ಇಡಿ ವಾಹನವು ಜಿಲ್ಲೆಯಲ್ಲಿ 5 ದಿನಗಳ ಕಾಲ ಆಯ್ದ ಸುಮಾರು 20 ಗ್ರಾಮಗಳಿಗೆ ಭೇಟಿ ನೀಡಿ ಪ್ರಚಾರ ಕೈಗೊಳ್ಳಲಿದೆ.  ವಾಹನದೊಂದಿಗೆ ಜಾನಪದ ಸಂಗೀತ ಕಲಾವಿದರೂ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ವೆಂಕಟೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸೇರಿದಂತೆ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಸದಸ್ಯರುಗಳಾದ ಅಬ್ದುಲ್ಲ, ಮುದಸಿರ್, ತಿಪ್ಪೇಸ್ವಾಮಿ ಜೆ.ಎಂ., ಮುಖಂಡರಾದ ಮಂಜುನಾಥ್ ಸೇರಿದಂತೆ ಇತರರು ಇದ್ದರು.

suddionenews

Recent Posts

ತಂತ್ರಜ್ಞಾನ ಆಧಾರಿತ ಭೋದನಾ ಸಾಧನಗಳನ್ನು ಅಳವಡಿಸಿಕೊಳ್ಳಿ : ಎನ್.ಆರ್. ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಶ್ರೀಧರ್, ತುರುವನೂರು ಮೊ: 78997 89545 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 :…

1 hour ago

AI ತಂತ್ರಜ್ಞಾನಗಳಿಂದ ಜಗತ್ತು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ : ಪ್ರಧಾನಿ ಮೋದಿ

ಸುದ್ದಿಒನ್ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ AI ಕ್ರಿಯಾ ಶೃಂಗಸಭೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ…

4 hours ago

ಸರ್ಕಾರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

  ಗುಬ್ಬಿ: ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ…

4 hours ago

ವೀಲ್ ಚೇರ್ ನಲ್ಲಿ ಬಂದ ಸಿಎಂ: ಸಿದ್ದರಾಮಯ್ಯ ಅವರ ಆರೋಗ್ಯ ಈಗ ಹೇಗಿದೆ..?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಎಡಗಾಲಿನ ಮಂಡಿನೋವು ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದೆರಡು…

4 hours ago

ಸೈಬರ್ ಮೋಸದ ಜಾಲಕ್ಕೆ ಸಿಲುಕಬೇಡಿ : ಜಿಪಂ ಸಿಇಒ ಸೋಮಶೇಖರ್

    ಚಿತ್ರದುರ್ಗ. ಫೆ.11: ದೇಶದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ಅಂತರ್ಜಾಲದಲ್ಲಿ ವಂಚನೆ ಮಾಡುವವರು ಕೂಡ ಹೆಚ್ಚಾಗುತ್ತಿದ್ದು, ಹೀಗಾಗಿ ಎಚ್ಚರ…

5 hours ago

ಫೆ.13 ರಿಂದ 15 ರವರೆಗೆ ಸಂತ ಸೇವಾಲಾಲರ 286 ನೇ ಜಯಂತಿ : ಆಹ್ವಾನ ಪತ್ರಿಕೆ ಬಿಡುಗಡೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago