Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೀಘ್ರ ಪರಿಹಾರಕ್ಕೆ ಡಿ.ಎಸ್.ಡಬ್ಲ್ಯೂ. ಮಲ್ಲಿಕಾರ್ಜುನ್ ಭರವಸೆ ಸಮಾಜ ಕಲ್ಯಾಣ ಇಲಾಖೆಗೆ ದಲಿತ ಸಂತ್ರಸ್ಥರಿಂದ ಮುತ್ತಿಗೆ

---Advertisement---

ಸುದ್ದಿಒನ್, ಚಿತ್ರದುರ್ಗ.ಏ.13: ಸಾಮಾಜಿಕ ಬಹಿಷ್ಕಾರ, ದೌರ್ಜನ್ಯ, ಶೋಷಣೆಗೆ ಒಳಪಟ್ಟ ದಲಿತ ಸಂತ್ರಸ್ತರು ಡಿ.ಎಸ್.ಎಸ್.ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

 

ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಸಂಘಟನೆಯಿಂದ ದಲಿತ ಸಂತ್ರಸ್ತರು ಸಮಾಜಕಲ್ಯಾಣ ಇಲಾಖೆ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಮನವಿ ಸಲ್ಲಿಸಿದರು.
ಪ್ರತಿಭಟನಾ ನಿರತ ದಲಿತ ಸಂತ್ರಸ್ತರ ಮನವಿ ಸ್ವೀಕರಿಸಿ, ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಅವರು ಚಿತ್ರದುರ್ಗ ಜಿಲ್ಲೆಯ ಮೂರು ತಾಲ್ಲೂಕಿನ ಏಳು ದಲಿತ ಕಾಲೋನಿಗಳಲ್ಲಿ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ದಲಿತರಿಗೆ ಪುನರ್‍ವಸತಿ ಮತ್ತು ನಾಗರೀಕ ಮೂಲಭೂತ ಸೌಲಭ್ಯ ಕಲ್ಪಿಸುವ ಬೇಡಿಕೆಯು ಕಳೆದ ಹದಿನಾಲ್ಕು ವರ್ಷಗಳಿಂದ ಇದ್ದು, ನಾನು ಇಲಾಖೆಯ ಅಧಿಕಾರಿಯಾಗಿ ವರ್ಗಾವಣೆಯಾಗಿ ಬಂದ ನಂತರ ಎಲ್ಲಾ ದಲಿತ ಕಾಲೋನಿಗಳ ಮಾಹಿತಿಗಳನ್ನು ಪಡೆದುಕೊಂಡಿದ್ದು, ಜಿಲ್ಲಾ ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ಮಲ್ಲಿಕಾರ್ಜುನ ಭರವಸೆ ನೀಡಿದರು.
ಈಗಾಗಲೇ ದಲಿತ ಸಂತ್ರಸ್ತರಿಗೆ ಪುನರ್‍ವಸತಿ ಕಾರ್ಯ ನಡೆಸಲು ಉದ್ದೇಶಿಸಲಾಗಿದ್ದು, ಕೆಲವು ದಲಿತ ಕಾಲೋನಿಗಳಲ್ಲಿ ಮನೆ ನಿರ್ಮಾಣಕ್ಕೆ ನಿವೇಶನಗಳನ್ನು ಜಿಲ್ಲಾಡಳಿತದ ಮೂಲಕ ಮಂಜೂರಾತಿಯಾಗಿದ್ದು, ಅವುಗಳನ್ನು ಸೂಕ್ತ ಸಂದರ್ಭದಲ್ಲಿ ವಿತರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಶೀಘ್ರದಲ್ಲಿಯೇ ದಲಿತ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಪತ್ರ ವ್ಯವಹಾರ ಮಾಡಿ, ಶೀಘ್ರ ಪರಿಹಾರ ಮಾಡಿಕೊಡಲಾಗುತ್ತದೆ ಎಂದು ಡಿ.ಎಸ್.ಡಬ್ಲ್ಯೂ. ಮಲ್ಲಿಕಾರ್ಜುನ ಹೇಳಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ ಮಾತನಾಡಿ, ಸಾಮಾಜಿಕ ಬಹಿಷ್ಕಾರ ಮತ್ತು ದೌರ್ಜನ್ಯಕ್ಕೊಳಪಟ್ಟ ದಲಿತರು ಸಂತ್ರಸ್ತರಾಗಿ ಈಗಾಗಲೇ ಹದಿನಾಲ್ಕು ವರ್ಷಗಳು ಮುಗಿಯುತ್ತಾ ಬಂದಿದ್ದರು, ಅವರುಗಳಿಗೆ ಪರಿಹಾರ ಇನ್ನೂ ಕೂಡ ಮರಿಚಿಕೆಯಾಗಿದೆ ಎಂದು ಹೇಳಿದರು.
ಹೊಸದುರ್ಗ ತಾಲ್ಲೂಕಿನ ದೊಡ್ಡಘಟ್ಟ, ಜಂತಿಕೊಳಲು, ಹಿರಿಯೂರು ತಾಲ್ಲೂಕಿನ ಶಿವನಗರ, ಕಂಬತ್ತಳ್ಳಿ, ಕುಂದಲಗುರ, ಚಳ್ಳಕೆರೆ ತಾಲ್ಲೂಕಿನ ದೊಡ್ಡಬೀರೇನಹಳ್ಳಿ, ಕೋನಿಗರಹಳ್ಳಿ ದಲಿತ ಕಾಲೋನಿಗಳಲ್ಲಿ 2013-14 ರಲ್ಲಿ ದಲಿತರನ್ನು ಬಹಿಷ್ಕರಿಸಿ ದೌರ್ಜನ್ಯವೆಸಗಲಾಗಿತ್ತು. ಈ ಪ್ರಕರಣಗಳ ನ್ಯಾಯಕ್ಕಾಗಿ ಕಳೆದ ಹನ್ನೆರಡು-ಹದಿಮೂರು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗಿದ್ದರೂ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ ಎಂದು ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ ಅಸಮಧಾನ ವ್ಯಕ್ತಪಡಿಸಿದರು.
ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ಸದಸ್ಯರಾದ ನರೇನಹಳ್ಳಿ ಅರುಣ್‍ಕುಮಾರ್ ಅವರು ಮಾತನಾಡಿ, ದಲಿತರಿಗೆ ಸಾಮಾಜಿಕ ಬಹಿಷ್ಕಾರ ಮತ್ತು ದೌರ್ಜನ್ಯಗಳು ನಡೆದು ಹತ್ತಾರು ವರ್ಷಗಳಾದರು ಸಮಾಜ ಕಲ್ಯಾಣ ಇಲಾಖೆ ಸಂತ್ರಸ್ತರಿಗೆ ನೆರವು ಕಲ್ಪಿಸುವಲ್ಲಿ ಹಿನ್ನೆಡೆ ಸಾಧಿಸಿರುವುದು ವಿಷಾದಕರ. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರದಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯ ತಡೆ ಕಾಯ್ದೆ ಸಮಿತಿ ಸಭೆಯಲ್ಲಿ ಚರ್ಚಿಸಿ, ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಒತ್ತಾಯಿಸಿದರು.
ಸಮಾಜ ಕಲ್ಯಾಣ ಇಲಾಖೆ ಮುತ್ತಿಗೆ ಕಾರ್ಯಕ್ರಮದಲ್ಲಿ ನೂರಾರು ಜನ ಸಂತ್ರಸ್ತರು ಭಾಗವಹಿಸಿ ತಮ್ಮ ಬೇಡಿಕೆ ಈಡೇರಿಕೆಗಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ನಿಯಂತ್ರಿಸಬೇಕು ಮತ್ತು ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಅವರಿಗೆ ಟಿ.ಡಿ.ರಾಜಗಿರಿ ಮತ್ತು ದಲಿತ ಸಂಘಟನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ಸದಸ್ಯರಾದ ಓಂಕಾರಮೂರ್ತಿ, ಪ್ರಶಾಂತ್‍ಕುಮಾರ್, ಡಿ.ಎಸ್.ಎಸ್.ರಾಜ್ಯ ಪ್ರಧಾನಕಾರ್ಯದರ್ಶಿ ಎಸ್.ರಂಗಸ್ವಾಮಿ ಕೋಟೆ, ಡಿ.ಎಸ್.ಎಸ್. ಜಿಲ್ಲಾಧ್ಯಕ್ಷ ಜೆ.ಜೆ.ಕಾಲೋನಿ ಮಂಜುನಾಥ್, ಸಾಮಾಜಿಕ ಕಾರ್ಯಕರ್ತ ಪದ್ಮನಾಭ, ತಿಮ್ಮಣ್ಣ, ಗಿರೀಶ್, ಮುಂತಾದವರು,

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...