ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಅತ್ತ ಸಾರಿಗೆ ಇಲಾಖೆ ನೌಕರರು ನಮ್ಮ ಬೇಡಿಕೆ ಈಡೇರಿಸದೆ ಹೋದರೆ ಮುಷ್ಕರ ಕೂರ್ತೀವಿ ಎಂದು ರೊಚ್ಚಿಗೆದ್ದಿದ್ದಾರೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆಯ್ದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಯು ಪಾರ್ಶ್ವವಾಯುವಿಗೆ ತುತ್ತಾಗಿದೆ. ದಿವಾಳಿಯತ್ತ ಕೊಂಡೊಯ್ಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿವೈ ವಿಜಯೇಂದ್ರ ಅವರು ಮಾತನಾಡಿ, ಒಂದು ಕಾಲದಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದ್ದ ಕರ್ನಾಟಕದ ಸಾರಿಗೆ ಇಲಾಖೆಯನ್ನು ಆರ್ಥಿಕವಾಗಿ ಕುಗ್ಗಿಸಿದ ಕೀರ್ತಿಗೆ ಕಾಂಗ್ರೆಸ್ ಸರ್ಕಾರ ಪಾತ್ರವಾಗಿದೆ. ಇಲಾಖೆಯ ಅಧೀನದಲ್ಲಿರುವ ನಾಲ್ಕು ನಿಗಮಗಳ ಬಾಕಿ ಮೊತ್ತ 6,468 ಕೋಟಿ ರೂಪಾಯಿಗೂ ಹೆಚ್ಚಿದ್ದು ತೀವ್ರ ಆರ್ಥಿಕ ನಷ್ಟದಲ್ಲಿ ಮುಳುಗಿದೆ. ಕಳೆದ ವೇತನ ಪರಿಷ್ಕರಣೆಯಾಗಿ 38 ತಿಂಗಳು ಕಳೆದಿದ್ದರೂ, ಬಾಕಿ ಪಾವತಿ ಹಾಗೆಯೇ ಉಳಿದಿದೆ. ಶಕ್ತಿ ಯೋಜನೆಯೂ ಈ ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸಿದೆ. ಇಲಾಖೆಯನ್ನು ದಿವಾಳಿಯ ಅಂಚಿಗೆ ದೂಡಿದೆ. ಸಾರಿಗೆ ನಿಗಮಗಳ ಆರ್ಥಕ ಸಂಕಷ್ಟವನ್ನು ಪರಿಹರಿಸಲು ಮತ್ತು ನೌಕರರ ಬಾಕಿ ಮೊತ್ತ ಪಾವತಿಯನ್ನು ಇತ್ಯರ್ಥಪಡಿಸಲು ಸರ್ಕಾರ ವಿಫಲವಾದರೆ ವ್ಯಾಪಕ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ.
ಈ ಸರ್ಕಾರದ ನಾಚಿಕೆಗೇಡಿನ ರೀತಿಯನ್ನು ಖಂಡಿಸಿ ಜನರು ಬೀದಿಗಿಳಿಯುವ ದಿನ ದೂರವಿಲ್ಲ ಎಂದು ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾಲ್ಕು ಸಾರಿಗೆ ನಿಗಮಗಳ ನೌಕರರು ಮೂಲ ವೇತನದಲ್ಲಿ ಶೇಕಡ 25 ರಷ್ಟು ಹೆಚ್ಚಳ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್