Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡ್ರಗ್ಸ್ ವಿರುದ್ಧ ಸಮರ ಸಾರಿದ ದುನಿಯಾ ವಿಜಯ್ : ಎಚ್ಚೆತ್ತ ಅಧಿಕಾರಿಗಳಿಂದ ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿ..!

---Advertisement---

ತುಮಕೂರು: ದುನಿಯಾ ವಿಜಯ್ ಅಭಿನಯದ ಭೀಮಾ‌ ಸಿನಿಮಾ ತೆರೆಗೆ ಬಂದಿದೆ. ರಾಜ್ಯದಲ್ಲೂ ಡ್ರಗ್ಸ್ ಜಾಲ ಎಷ್ಟರಮಟ್ಟಿಗೆ ಇದೆ ಎಂಬುದನ್ನು ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಿರುವುದಲ್ಲದೆ ರಿಯಲ್ ಆಗಿಯೂ ಆಖಾಡಕ್ಕೆ ಇಳಿದಿದ್ದಾರೆ. ಸ್ಟಿಂಗ್ ಆಪರೇಷನ್ ಮಾಡುವ ಮೂಲಕ ಮಾದಕ ದ್ರವ್ಯದ ಜಾಲವನ್ನು ಎಳೆ ಎಳೆಯಾಗಿ ದುನಿಯಾ ಬಿಚ್ಚಿಡುತ್ತಿದ್ದಾರೆ.

ದುನಿಯಾ ವಿಜಯ್ ಅವರ ಈ ಕಾರ್ಯಕ್ಕೆ ಒಂದು ಕಡೆ ಮೆಚ್ಚುಗೆ ವ್ಯಕ್ತವಾಗಿದ್ದರೆ, ಮತ್ತೊಂದು ಕಡೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳೇ ಶಾಕ್ ಆಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿರುವ ಮೆಡಿಕಲ್ ಸ್ಟೋರ್ ಗಳ ಮೇಲೆ ಡ್ರಗ್ಸ್ ಕಂಟ್ರೋಲ್ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ವೇಳೆ ಡ್ರಗ್ಸ್ ಗೆ ಸಂಬಂಧಿಸಿದಂತ ಮಾತ್ರೆಗಳು ಪತ್ತೆಯಾಗಿರುವುದು ಕಂಡು ಬಂದಿದೆ.

ಮೆಡಿಕಲ್ ಗಳಲ್ಲಿ ಯಾವಾಗ ಡ್ರಗ್ಸ್ ಗಳು ಪತ್ತೆಯಾದವೋ ಪೊಲೀಸರು ತೀವ್ರ ತನಿಖೆಯನ್ನು ಶುರು ಮಾಡಿದ್ದಾರೆ. ವೈದ್ಯರ ಚೀಟಿಯಿಲ್ಲದೆ, ಮತ್ತು ಬರಿಸುವ ಮಾತ್ರೆಗಳ ಮಾರಾಟದ ಬಗ್ಗೆ ಅಧಿಕಾರಿಗಳು ಎಚ್ಚೆತ್ತು, ತನಿಖೆ ಶುರು ಮಾಡಿದ್ದಾರೆ. ಕುಣಿಗಲ್ ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿ ಇರುವ ಲಕ್ಷ್ಮೀ ವೆಂಕಟೇಶ್ವರ ಮೆಡಿಕಲ್ ಸ್ಟೋರ್ ಹಾಗೂ ಸಂತೆ ಮಾವತ್ತೂರಿನ ತಿರುಮಲ ಮೆಡಿಕಲ್ ಸ್ಟೋರ್‌ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿ ವೇಳೆ ಮೆಡಿಕಲ್ ಸ್ಟೋರ್ ಗಳಲ್ಲಿ ಡ್ರಗ್ಸ್ ಮಾತ್ರೆಗಳು ಪತ್ತೆಯಾಗಿದ್ದು, ಡ್ರಗ್ಸ್ ಕಂಟ್ರೋಲ್ ಅಧಿಕಾರಿಗಳು ಹಾಗೂ ಕುಣಿಗಲ್ ತಾಲೂಕು ವೈದ್ಯಾಧಿಕಾರಿ ಡಾ.ಮರಿಯಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...