ಮೈಸೂರು: ಬೆಂಗಳೂರು ಹೊರವಲಯ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಈ ಸಂಬಂಧ ಮಾತನಾಡಿರುವ, ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯಲ್ಲಿ ನಡೆದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಗೋದಾಮು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಪಟಾಕಿ ಗೋಧಾಮಿನಲ್ಲಿ ಸುರಕ್ಷತಾ ಕ್ರಮ ಹಾಗೂ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದ್ದಾರೆಯೇ..? ಎಂಬುದನ್ನು ಪರಿಶೀಲಿಸುವುದಕ್ಕೆ ತಿಳಿಸಲಾಗಿದೆ. ಅದರ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೋನ್ ಇದೆ. ಅದಕ್ಕೆ ಲಾರಿಯಿಂದ ಬಂದ ಪಟಾಕಿಯನ್ನು ಇಳಿಸುವಾಗ ಬೆಂಕಿ ಕಾಣಿಸಿಕೊಂಡಿದೆ. ಇದ್ದಕ್ಕಿದ್ದ ಹಾಗೇ ಜೋರಾಗಿಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. ಗೋಡೌನ್ ನಲ್ಲಿ ಆ ಸಮಯದಲ್ಲಿ 20 ಜನ ಕೆಲಸ ಮಾಡುತ್ತಿದ್ದರು. ಅದರಲ್ಲಿ ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ. ಘಟನೆಯ ಸಂಬಂಧ ಸಿಎಂ ಸಿದ್ದರಾಮಯ್ಯ ಕೂಡ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಮೃತರು ಎಲ್ಲಿಯವರು ಎಂಬ ಕಂಪ್ಲೀಟ್ ಮಾಹಿತಿ ಇನ್ನು ಸಿಕ್ಕಿಲ್ಲ. ತನಿಖೆ ನಡೆಸುತ್ತಿತ್ತು, ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.