Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತ್ತಿಬೆಲೆಯಲ್ಲಿ ಅಗ್ನಿದುರಂತ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ..!

---Advertisement---

 

ಮೈಸೂರು: ಬೆಂಗಳೂರು ಹೊರವಲಯ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಈ ಸಂಬಂಧ ಮಾತನಾಡಿರುವ, ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯಲ್ಲಿ ನಡೆದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಗೋದಾಮು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಪಟಾಕಿ ಗೋಧಾಮಿನಲ್ಲಿ ಸುರಕ್ಷತಾ ಕ್ರಮ ಹಾಗೂ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದ್ದಾರೆಯೇ..? ಎಂಬುದನ್ನು ಪರಿಶೀಲಿಸುವುದಕ್ಕೆ ತಿಳಿಸಲಾಗಿದೆ. ಅದರ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ರಾಜಧಾನಿ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೋನ್ ಇದೆ. ಅದಕ್ಕೆ ಲಾರಿಯಿಂದ ಬಂದ ಪಟಾಕಿಯನ್ನು ಇಳಿಸುವಾಗ ಬೆಂಕಿ ಕಾಣಿಸಿಕೊಂಡಿದೆ. ಇದ್ದಕ್ಕಿದ್ದ ಹಾಗೇ ಜೋರಾಗಿ‌ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. ಗೋಡೌನ್ ನಲ್ಲಿ ಆ ಸಮಯದಲ್ಲಿ 20 ಜನ ಕೆಲಸ‌ ಮಾಡುತ್ತಿದ್ದರು. ಅದರಲ್ಲಿ ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ. ಘಟನೆಯ ಸಂಬಂಧ ಸಿಎಂ ಸಿದ್ದರಾಮಯ್ಯ ಕೂಡ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಮೃತರು ಎಲ್ಲಿಯವರು ಎಂಬ ಕಂಪ್ಲೀಟ್ ಮಾಹಿತಿ ಇನ್ನು ಸಿಕ್ಕಿಲ್ಲ. ತನಿಖೆ ನಡೆಸುತ್ತಿತ್ತು, ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment