Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದ್ವಾರಕೀಶ್ ಅಂತಿಮ ದರ್ಶನ ಪಡೆದ ಯಶ್ : ಬದುಕಿನ ಬಗ್ಗೆ ಹೇಳಿದ್ದೇನು..?

---Advertisement---

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಹಿರಿಯ ನಟ ದ್ವಾರಕೀಶ್ ಅವರು ನಿನ್ನೆ ನಿಧನ ಹೊಂದಿದ್ದಾರೆ. ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟ ಯಶ್ ಇಂದು ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಹಿರಿಯ ನಟನಿಗೆ ನಮನ ಸಲ್ಲಿಸಿದ್ದಾರೆ.

 

ಈ ವೇಳೆ ಮಾತನಾಡಿದ ನಟ ಯಶ್, ಪ್ರಪಂಚದಲ್ಲಿ ತುಂಬಾ ಜನ ಹುಟ್ಟುತ್ತಾರೆ, ತುಂಬಾ ಜನ ಸಾಯುತ್ತಾರೆ. ಬದು ಎಂಬುದು ಒಂದು ಅವಕಾಶ. ಆ ಅವಕಾಶದಲ್ಲಿ ನೀವೆಷ್ಟು ಧೈರ್ಯ ಮಾಡುತ್ತೀರಾ, ಏನು ಸಾಧಿಸುತ್ತೀರಾ, ಯಾವ ಮಟ್ಟಕ್ಕೆ ಬದುಕನ್ನು ರೂಪಿಸಿಕೊಳ್ಳುತ್ತೀರಾ ಎಂಬುದು ಬಹಳ ಮುಖ್ಯ. ಅದಕ್ಕೆ ಉತ್ತಮ ಉದಾಹರಣೆ ದ್ವಾರಕೀಶ್ ಅವರು. ಸಿನಿಮಾಗೆ ಹೀರೋ ಆಗೋಕೆ ಹೀಗೆ ಇರಬೇಕು, ಹಾಗೇ ಇರಬೇಕು ಎಂಬ ನಾರ್ಮ್ಸ್ ಇರುತ್ತಲ್ಲ ಅದನ್ನೆಲ್ಲ ಹೊಡೆದು ದ್ವಾರತಾವರು ತಮ್ಮದೇ ಆದಂತ ಸಾಧನೆ ಮಾಡಿದ ಮಹಾನ್ ವ್ಯಕ್ತಿತ್ವ ಅವರದ್ದು.

ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾದಂತದ್ದು. ಅವರನ್ನು ನೋಡಿದಾಗ ತುಂಬಾ ಸ್ಪೂರ್ತಿಯಾಗುತ್ತೆ. ಅವರನ್ನ ನಾವೆಲ್ಲ ಖುಷಿಯಿಂದ ಕಳುಹಿಸಿಕೊಡಬೇಕು ಎಂದು ಯಶ್ ಹೇಳಿದ್ದಾರೆ. ಚಿತ್ರರಂಗದ ಗಣ್ಯರೆಲ್ಲ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ಆಗಮಿಸಿ,‌ ವಿದಾಯ ಹೇಳಿದ್ದಾರೆ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಬೇಡಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...