ಬೆಂಗಳೂರು : ರಾಜ್ಯದ ಪಡಿತರ ಚೀಟಿ (ರೇಷನ್ ಕಾರ್ಡ್) ಹೊಂದಿರುವ ಫಲಾನುಭವಿಗಳಿಗೆ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನವೆಂಬರ್ 10ರವರೆಗೆ ಗಡುವನ್ನು ವಿಸ್ತರಿಸಿದೆ.
ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ ಅರ್ಹರಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡಲು ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಫಲಾನುಭವಿಗಳು ಈ ಕೆಳಗಿನ ವಿಧಾನಗಳ ಮೂಲಕ ಸುಲಭವಾಗಿ ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ:
‘ಅನ್ನ ಸೇವೆ’ ಮೊಬೈಲ್ ಆ್ಯಪ್: ಗೂಗಲ್ ಪ್ಲೇ ಸ್ಟೋರ್ನಲ್ಲಿ (Google Play Store) ಲಭ್ಯವಿರುವ ‘ಅನ್ನ ಸೇವೆ’ (Anna Seve) ಮೊಬೈಲ್ ಆ್ಯಪ್ನ ನವೀಕೃತ ಆವೃತ್ತಿಯನ್ನು ಡೌನ್ಲೋಡ್ ಮಾಡಿಕೊಂಡು, ಮನೆಯಲ್ಲಿಯೇ ಕುಳಿತು ಸುಲಭವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು.

ನ್ಯಾಯಬೆಲೆ ಅಂಗಡಿಗಳು: ಆನ್ಲೈನ್ ಅಥವಾ ಮೊಬೈಲ್ ಮೂಲಕ ಮಾಡಲು ಸಾಧ್ಯವಾಗದವರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ (Fair Price Shops) ಭೇಟಿ ನೀಡಿ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಪಡಿತರ ಚೀಟಿದಾರರು ಯಾವುದೇ ರೀತಿಯ ತೊಂದರೆಯಾಗದಂತೆ ತಪ್ಪಿಸಲು ನಿಗದಿತ ನವೆಂಬರ್ 10ರ ಒಳಗಾಗಿ ಈ ಪ್ರಕ್ರಿಯೆಯನ್ನು ಮುಗಿಸಿಕೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಳಿಸುವ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಅಥವಾ ನ್ಯಾಯಬೆಲೆ ಅಂಗಡಿಗಳ ಮೂಲಕ ಮನೆಯಲ್ಲಿಯೇ ಸುಲಭವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬಹುದು. ಎಲ್ಲ ಅರ್ಹ ಫಲಾನುಭವಿಗಳು ನಿಗದಿತ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳುಬಹುದು. pic.twitter.com/SLXXP1LgoH
— DIPR Karnataka (@KarnatakaVarthe) October 21, 2026











