Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ ಕಡ್ಡಾಯ : ನವೆಂಬರ್ 10 ಕೊನೆಯ ದಿನ

---Advertisement---

ಬೆಂಗಳೂರು : ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಡ್ಡಾಯಗೊಳಿಸಿದೆ.

ಇ-ಕೆವೈಸಿ ಮಾಡಿಸಿಕೊಳ್ಳದ ಫಲಾನುಭವಿಗಳು ತಕ್ಷಣವೇ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಥವಾ ‘ಅನ್ನಸೇವೆ’ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ.

ಇ-ಕೆವೈಸಿ ಮಾಡಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿದೆ. ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸದ ಫಲಾನುಭವಿಗಳ ವಿರುದ್ಧ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಬಳ್ಳಾರಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now