Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರತಿ ಯೂನಿಟ್ ರಕ್ತದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು : ಚಿತ್ರದುರ್ಗದಲ್ಲಿ ಅರ್ಥಪೂರ್ಣ ರಕ್ತದಾನ ಶಿಬಿರ

---Advertisement---

 

ಚಿತ್ರದುರ್ಗ. ನ. 08: ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಎಷ್ಟೇ ಬದಲಾವಣೆಯಾದರೂ ರಕ್ತವನ್ನು ಕಾರ್ಖಾನೆಗಳಲ್ಲಿ ಉತ್ಪಾದಿಸಲು ಸಾಧ್ಯವಿಲ್ಲ ಎಂದು 1ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಕೆ.ಜಿ.ಸತೀಶ ತಿಳಿಸಿದರು.

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಈಚೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆ, ಡಿ.ಜಿ.ಎಂ. ಅಲುಮ್ನಿ ಅಸೋಸಿಯೇಷನ್ ಗದಗ ಅನುಸ್ಕರಣ 2001ನೇ ಬ್ಯಾಚ್, ಸರ್ಕಾರಿ ಕಲಾ ಕಾಲೇಜು, ಅಮೃತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ನ್ಯಾಯಮೂರ್ತಿ ಶಿವರಾಜ ವಿ ಪಾಟೀಲ್ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಮಾಡುವುದರಿಂದ ಶರೀರವು ಚೈತನ್ಯ ಮತ್ತು ಲವಲವಿಕೆಯಿಂದ ಕೂಡಿರುತ್ತದೆ. ಇಂತಹ ರಕ್ತದಾನ ಶಿಬಿರಗಳನ್ನು ನಡೆಸುವುದರಿಂದ ಹಲವರ ಪ್ರಾಣ ಉಳಿಸಲು ಸಾಧ್ಯ ಎಂದರು.

ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್. ತಾರಿಣಿ ಶುಭದಾಯಿನಿ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಇಂತಹ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಿಸಿದರೆ ಪ್ರತಿ ಯೂನಿಟ್ ರಕ್ತದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಕಾಲೇಜಿನ ವಿವಿಧ ಘಟಕಗಳು ಹಾಗೂ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶಮೀರ್ ಪಿ. ನಂದ್ಯಾಲ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆಯ ಸಭಾಪತಿ ಗಾಯಿತ್ರಿ ಶಿವರಾಂ, ಡಿ.ಜಿ.ಎಂ. ಅಲುಮ್ನಿ ಅಸೋಸಿಯೇಷನ್ ಗದಗದ ಸಹ ಕಾರ್ಯದರ್ಶಿ ಡಾ. ನವೀನ್ ಬಿ. ಸಜ್ಜನ್, ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನದ ಜಿಲ್ಲಾ ಸಂಯೋಜಕಿ ದಿಲ್ ಶಾದ್ ಉನ್ನಿಸಾ, ಸರ್ಕಾರಿ ಕಲಾ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಲೀಲಾವತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ಎಂ.ಕೆ. ಅನಂತ ರೆಡ್ಡಿ, ಚಿತ್ರದುರ್ಗದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಅರುಣ್ ಕುಮಾರ್, ಸರ್ಕಾರಿ ಕಲಾ ಕಾಲೇಜಿನ ಅಧೀಕ್ಷಕ ಹರೀಶ್ ಬಾಬು ರೆಡ್ಡಿ ಹಾಗೂ ಜಿಲ್ಲಾ ಕಾರ್ಯದರ್ಶಿ ಮಜಹರ್ ಉಲ್ಲಾ ಇದ್ದರು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಪ್ರಸಾದ್ ವಿ ಸ್ವಾಗತಿಸಿದರು, ಯುವ ರೆಡ್ ಕ್ರಾಸ್ ಸಂಚಾಲಕ ಡಾ. ಪ್ರದೀಪ್ ಕುಮಾರ್ ನಿರೂಪಿಸಿದರು ಮತ್ತು ಎನ್.ಎಸ್.ಎಸ್. ಘಟಕ-2ರ ಕಾರ್ಯಕ್ರಮಾಧಿಕಾರಿ ಡಾ. ಬಿ.ಕೆ. ಬಸವರಾಜ ವಂದಿಸಿದರು. ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now