ಸುದ್ದಿಒನ್, ಚಿತ್ರದುರ್ಗ, ಸೆ.13: ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಮತ್ತು ಲೋಹ ಮಿಶ್ರಿತ ಬಣ್ಣದಿಂದ ತಯಾರಿಸಿದ ವಿಗ್ರಹಗಳ ಬಳಕೆಯನ್ನು ಸರ್ಕಾರ ನಿಷೇಧಿಸಲಾಗಿದ್ದು, ಪರಿಸರಕ್ಕೆ ಹಾನಿಕಾರವಾಗುವ ಇಂತಹ ವಿಗ್ರಹಗಳ ಮಾರಾಟ ಹಾಗೂ ಬಳಕೆಗೆ ಅವಕಾಶವಿಲ್ಲ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಹೇಳಿದರು.
ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಹಾಗೂ ಬಳಕೆ ಕುರಿತಂತೆ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬೆನ್ನಲ್ಲೇ ಚಿತ್ರದುರ್ಗ ನಗರಸಭೆಯ ಅಧಿಕಾರಿಗಳ ತಂಡ ಚಿತ್ರದುರ್ಗ ನಗರದ ವಿವಿಧ ಭಾಗಗಳಲ್ಲಿ ಭೇಟಿ ನೀಡಿ ಪರಸರ ಗಣೇಶೋತ್ಸವ ಹಿನ್ನೆಲೆಯಲ್ಲಿ ಮಣ್ಣಿನ ಗಣೇಶ ಮಾಡಿ, ಯಾವುದೇ ಕಾರಣದಿಂದಾಗಿ ಪಿಒಪಿ ಬಳಸಬೇಡಿ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲಾ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದು ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ಕೂಡಲೇ ಅದನ್ನು ವಶಪಡಿಸಿಕೊಳ್ಳಬೇಕು ಎಂದು ಪೌರಾಯುಕ್ತರಾದ ಶ್ರೀಮತಿ ಎಂ. ರೇಣುಕಾ ಅವರು ಹೇಳಿದರು.
ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಲಾಗುತ್ತಿದ್ದು, ಗಣೇಶಮೂರ್ತಿ ವಿಸರ್ಜನೆ ಮಾಡುವ ಸ್ಥಳಗಳ ಕುರಿತು ಸ್ಥಳೀಯವಾಗಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡುತ್ತೇವೆ, ಪರಿಸರಕ್ಕೆ ಹಾನಿಯುಂಟು ಮಾಡುವ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜನೆಗೆ ಅವಕಾಶ ನೀಡುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಪರಿಸರ ಅಭಿಯಂತರ ಜಾಫರ್, ರೆವಿನ್ಯೂ ಇನ್ಸ್‍ಪೆಕ್ಟರ್ ಸಿ.ಮೋಕ್ಷದಾಯಿನಿ, ಯೋಗೇಂದ್ರ, ಆರೋಗ್ಯ ನಿರೀಕ್ಷಕರಾದ ಭಾರತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಾಶ್, ಉಪ ಪರಿಸರ ಅಧಿಕಾರಿಗಳಾದ ರಾಜೇಶ್, ವನ್ಯಜೀವಿ ಮತ್ತು ಪರಿಸರ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಇದ್ದರು.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…