ಈ ಹಿಂದೆಯೇ ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ಹೇಳಿದ್ದೆವು : ದಿನೇಶ್ ಗುಂಡೂರಾವ್

1 Min Read

BJP ಬಿ ಟೀಂ JDS ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ HDK ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

JDS ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ BJP ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ JDSಗೆ ಯಾವ ಸಿದ್ದಾಂತವಿದೆ?. ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ.

JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ.

BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *