Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮೇ 26 ರಿಂದ ಪ್ರೌಢಶಾಲಾ ಶಿಕ್ಷಕರಿಗಾಗಿ ‘ಭೂ ಮತ್ತು ಪರಿಸರ ವಿಜ್ಞಾನ’ ಕಾರ್ಯಾಗಾರ

---Advertisement---

ಸುದ್ದಿಒನ್,ಚಿತ್ರದುರ್ಗ,ಮೇ.24: ಶಾಲೆಗಳಲ್ಲಿ ಸಾಂಪ್ರದಾಯಿಕ ಉಪನ್ಯಾಸ ಪದ್ಧತಿಯನ್ನು ಬದಿಗಿಟ್ಟು, ಚಟುವಟಿಕೆ ಆಧಾರಿತ ಹಾಗೂ ಅನುಭವದ ಕಲಿಕೆಯ ಮೂಲಕ ಭೂವಿಜ್ಞಾನವನ್ನು ಬೋಧಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ಶಿಕ್ಷಕರಿಗಾಗಿ ವಿಶೇಷ ಕಾರ್ಯಾಗಾರವೊಂದನ್ನು ಆಯೋಜಿಸಲಾಗಿದೆ.

ಅಂತರರಾಷ್ಟ್ರೀಯ ಭೂವಿಜ್ಞಾನ ಶಿಕ್ಷಣ ಸಂಸ್ಥೆ ಮತ್ತು ಗ್ರಾಮಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಇದೇ ಮೇ 26ರಿಂದ 28ರವರೆಗೆ ಚಿತ್ರದುರ್ಗದ ‘ಗ್ರಾಮಾ ತರಬೇತಿ ಕೇಂದ್ರ’ದಲ್ಲಿ ಈ ಮೂರು ದಿನಗಳ ‘ಭೂ ಮತ್ತು ಪರಿಸರ ವಿಜ್ಞಾನ ಕಾರ್ಯಾಗಾರ ನಡೆಯಲಿದೆ.

ಭೂವಿಜ್ಞಾನವು ತರಗತಿ ಕೋಣೆಗಳ ನಾಲ್ಕು ಗೋಡೆಗಳ ಮಧ್ಯೆ ಇಲ್ಲ, ಅದು ಇರುವುದು ಹೊರಾಂಗಣದಲ್ಲಿ ಎಂಬ ಪರಿಕಲ್ಪನೆಯೊಂದಿಗೆ ಈ ಕಾರ್ಯಾಗಾರವನ್ನು ರೂಪಿಸಲಾಗಿದೆ. ಕೇವಲ ನೆನಪಿನ ಶಕ್ತಿಗೆ ಒತ್ತು ನೀಡುವ ಹಳೆಯ ಬೋಧನಾ ಪದ್ಧತಿಗೆ ತದ್ವಿರುದ್ಧವಾಗಿ, ಶಿಕ್ಷಕರಲ್ಲಿ ವಿಮರ್ಶಾತ್ಮಕ ವಿಶ್ಲೇಷಣೆ ಮತ್ತು ಚಿಂತನಾ ಕೌಶಲ್ಯಗಳನ್ನು ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸು ಮಾಡಿರುವ ಅನುಭವದ ಕಲಿಕಾ ವಿಧಾನಕ್ಕೆ ಪೂರಕವಾಗಿ ಈ ಕೆಳಗಿನ ವಿಭಿನ್ನ ಹಂತಗಳಲ್ಲಿ ತರಬೇತಿ ನಡೆಯಲಿದೆ. ಶಿಕ್ಷಕರು ನೇರವಾಗಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಸರವನ್ನು ಸೂಕ್ಷ್ಮವಾಗಿ ಗಮನಿಸಲಿದ್ದಾರೆ. ಪರಿಸರದ ಬಗ್ಗೆ ಮನಸ್ಸಿನಲ್ಲಿ ಮೂಡುವ ಪ್ರಶ್ನೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ.ಸ್ಥಳೀಯ ಶಿಲೆಗಳನ್ನು (ಬಂಡೆಗಳನ್ನು) ಪರಿಶೀಲಿಸಿ, ವರ್ಕ್ಶೀಟ್ಗಳಲ್ಲಿ ಟಿಪ್ಪಣಿ ಮಾಡಿಕೊಳ್ಳಲಿದ್ದಾರೆ.ಕ್ಷೇತ್ರ ಭೇಟಿಯ ನಂತರ ಪ್ರಯೋಗಾಲಯದಲ್ಲಿ ಅಗತ್ಯ ಪ್ರಯೋಗಗಳನ್ನು ನಡೆಸಿ, ತಜ್ಞರೊಂದಿಗೆ ಸಂವಾದ ನಡೆಸಲಿದ್ದಾರೆ.ತಾವು ಕಂಡುಕೊಂಡ ಉತ್ತರಗಳು ಮತ್ತು ತೀರ್ಮಾನಗಳು ಸರಿಯಾಗಿವೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಕ್ಷೇತ್ರ ತಾಣಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.ಈ ಕಲಿಕಾ ಪ್ರಕ್ರಿಯೆಗಾಗಿ ಹೊರಾಂಗಣ, ತರಗತಿ ಕೊಠಡಿ, ಪ್ರಯೋಗಾಲಯ ಮತ್ತು ಇಂಟರ್ನೆಟ್ ಸೇರಿದಂತೆ ನಾಲ್ಕೂ ವಿಭಿನ್ನ ಪರಿಸರಗಳನ್ನು ಬಳಸಿಕೊಳ್ಳಲಾಗುತ್ತಿದೆ.

 

ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯ ಪರಿಣಾಮವಾಗಿ ಜಗತ್ತು ಅತಿ ತೀವ್ರತೆಯ ನೈಸರ್ಗಿಕ ಮತ್ತು ಮಾನವ ನಿರ್ಮಿತ ವಿಕೋಪಗಳನ್ನು ಎದುರಿಸುತ್ತಿದೆ. ಯುವಪೀಳಿಗೆಗೆ ಸೂಕ್ತ ಭೂವಿಜ್ಞಾನದ ವಿದ್ಯಾಭ್ಯಾಸವನ್ನು ನೀಡದಿರುವುದು ಹಾಗೂ ಸಮಾಜದಲ್ಲಿ ಭೂವಿಜ್ಞಾನದ ಬಗ್ಗೆ ಅಗತ್ಯ ಅರಿವು ಮೂಡಿಸದೆ ಇರುವುದೇ ಇಂತಹ ವಿಕೋಪಗಳಿಗೆ ಮುಖ್ಯ ಕಾರಣವಾಗಿದೆ ಎಂದು ಆಯೋಜಕರು ಕಳವಳ ವ್ಯಕ್ತಪಡಿಸಿದ್ದಾರೆ.

 

ಈ ಕಾರ್ಯಾಗಾರದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಾಗತಿಕ ಮಟ್ಟದ ಭೂವಿಜ್ಞಾನ ತಜ್ಞ ಪ್ರೊ. ಆರ್. ಶಂಕರ್ ಅವರು ಭಾಗವಹಿಸಲಿದ್ದಾರೆ. ಮೂಲತಃ ಚಿತ್ರದುರ್ಗದವರೇ ಆದ ಇವರು, ಮಂಗಳೂರು ವಿಶ್ವವಿದ್ಯಾಲಯದಲ್ಲಿ 37 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಪ್ರಸ್ತುತ ಇವರು ಅಂತರರಾಷ್ಟ್ರೀಯ ಭೂವಿಜ್ಞಾನ ಶಿಕ್ಷಣ ಸಂಸ್ಥೆಯ ಸಲಹೆಗಾರರಾಗಿ, ಅಂತರರಾಷ್ಟ್ರೀಯ ಭೂವಿಜ್ಞಾನ ಒಲಿಂಪಿಯಾಡ್ನ ಸಂಯೋಜಕರಾಗಿ ಹಾಗೂ ನವದೆಹಲಿಯ ಎನ್.ಸಿ.ಇ.ಆರ್.ಟಿ.ಯ ವಿಜ್ಞಾನ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now