Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಈ ಜಿಲ್ಲೆಯಲ್ಲಿ ಭೂಕಂಪ

---Advertisement---

ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವ ಉಂಟಾಗಿದೆ. ಏಕಾಏಕಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದರಿಂದ ವಿಜಯಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ.

ವಿಜಯಪುರದಲ್ಲಿ ಇಂದು ಬೆಳಗ್ಗೆ 11.43ರ ಸುಮಾರಿಗೆ ಜೋರಾದ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ.ಆದರ್ಶ ನಗರ ಭೂತನಾಳ ಪಾನಿ ನಗರ ಮತ್ತು ಇತರೆ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ.ಮನೆಯಲ್ಲಿದ್ದಂತ ಪಾತ್ರೆಗಳು ಕೆಳಗೆ ಬಿದ್ದು ಸದ್ದು ಮಾಡಿದ್ದಾವೆ.

ಕೆಲ ತಿಂಗಳುಗಳ ಹಿಂದೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಮಟ್ಟದ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now