Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಬೊಲಾ ವೈರಸ್ ಎಚ್ಚರಿಕೆ: ಕರ್ನಾಟಕ ಆರೋಗ್ಯ ಇಲಾಖೆ ಹೈ ಅಲರ್ಟ್‌..!

---Advertisement---

ಆಫ್ರಿಕಾ ಖಂಡದ ಕೆಲವು ರಾಷ್ಟ್ರಗಳಲ್ಲಿ ಎಬೊಲಾ ವೈರಸ್ ಸೋಂಕಿನ ಆತಂಕ ಹೆಚ್ಚುತ್ತಿರುವ ಹಿನ್ನೆಲೆ ದೇಶಾದ್ಯಂತ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಿದೆ. ಕರ್ನಾಟಕದಲ್ಲಿಯೂ ಆರೋಗ್ಯ ಇಲಾಖೆ ಸಂಪೂರ್ಣ ಅಲರ್ಟ್ ಆಗಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಫ್ರಿಕಾ ಖಂಡದ ಕಾಂಗೋ ಹಾಗೂ ಉಗಾಂಡ ದೇಶಗಳಲ್ಲಿ ಎಬೊಲಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ರಾಜ್ಯದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.ಸದ್ಯದ ಮಟ್ಟಿಗೆ ಭಾರತದಲ್ಲಿ ಎಬೊಲಾ ವೈರಸ್‌ನ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ಆದರೂ ಮುಂಜಾಗ್ರತಾ ಕ್ರಮವಾಗಿ ದೇಶದ ಪ್ರಮುಖ ವಿಮಾನ ನಿಲ್ದಾಣಗಳು ಹಾಗೂ ಅಂತರರಾಷ್ಟ್ರೀಯ ಪ್ರವೇಶ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಬಿಗಿಗೊಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಸಚಿವರು ಮಾಹಿತಿ ನೀಡಿದರು.

ಕೋವಿಡ್ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವ ರಾಜ್ಯ ಆರೋಗ್ಯ ಇಲಾಖೆಗೆ ಇದ್ದು, ಎಬೊಲಾ ತಡೆಗೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೊಸ ಸೂಚನೆಗಳು ಬಂದ ತಕ್ಷಣ ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಆತಂಕದ ಪರಿಸ್ಥಿತಿ ಎದುರಾದರೂ ಸಮರ್ಥವಾಗಿ ನಿಭಾಯಿಸಲು ರಾಜ್ಯ ಸಿದ್ಧವಾಗಿದೆ” ಎಂದು ದಿನೇಶ್ ಗುಂಡೂರಾವ್ ಹೇಳಿದರು.

ವಿಶೇಷವಾಗಿ ಕಾಂಗೋ ಮತ್ತು ಉಗಾಂಡ ಸೇರಿದಂತೆ ಆಫ್ರಿಕಾ ರಾಷ್ಟ್ರಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸುವ ಸಾಧ್ಯತೆ ಇದೆ. ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ, ಸ್ಕ್ರೀನಿಂಗ್ ಮತ್ತು ವೈದ್ಯಕೀಯ ಮೇಲ್ವಿಚಾರಣೆಯನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಕೇಂದ್ರ ಸರ್ಕಾರದ ಸೂಚನೆ ನಿರೀಕ್ಷಿಸಲಾಗುತ್ತಿದೆ.ಎಬೊಲಾ ವೈರಸ್ ಅತಿ ಅಪಾಯಕಾರಿ ಸೋಂಕುಗಳಲ್ಲೊಂದು ಎಂದು ಪರಿಗಣಿಸಲಾಗಿದ್ದು, ಸೋಂಕಿತ ವ್ಯಕ್ತಿಯ ದೇಹದ ದ್ರವಗಳ ಸಂಪರ್ಕದಿಂದ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯ ಆತಂಕಕ್ಕೊಳಗಾಗದೆ, ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ತಜ್ಞರು ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now