Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಶಾಸಕನ 1.32 ಕೋಟಿ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ..!

---Advertisement---

ಕೋಲಾರ: ಮಾಲೂರಿನ ಕಾಂಗ್ರೆಸ್ ಶಾಸಕನಿಗೆ ಇಡಿ ಶಾಕ್ ನೀಡಿದೆ. ಕೆವೈ ನಂಜೇಗೌಡ ಹಾಗೂ ಇತರರಿಗೆ ಸೇರಿದ 1.3 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ನಂಜೇಗೌಡ ಮನೆ, ಕಚೇರಿ ಇನ್ನಿತರ ಕಡೆ ದಾಳಿ ನಡೆಸಿದ ಇಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಕೋಲಾರ ಹಾಕು ಒಕ್ಕೂಟದಲ್ಲಿ ನೇಮಕಾತಿ ನಡೆದಿತ್ತು. ಈ ಸಂಬಂಧ ನಂಜೇಗೌಡ ಹೆಸರು ಕೇಳಿ ಬಂದಿತ್ತು. ಈ ಸಂಬಂಧ ಇಡಿ ಅಧಿಕಾರಿಗಳು ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ 2023 ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳ ನಡೆದಿರುವ ಆರೋಪ ಕೇಳಿ ಬಂದಿತ್ತು. ಮುಖ್ಯವಾಗಿ ಒಕ್ಕೂಟದಲ್ಲಿ ಉದ್ಯೋಗಗಳ ನೇಮಕಾತಿಯ ಸಂದರ್ಭದಲ್ಲಿ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆ ಮತ್ತು ಪ್ರಭಾವ ಬಳಸಿಕೊಂಡು ಅವ್ಯವಹಾರ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಗರಣಗಳಲ್ಲಿ ವಿಶೇಷವಾಗಿ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಹೆಸರು ಕೇಳಿ ಬಂದಿತ್ತು. ನಂಜೇಗೌಡ ಅವರು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2023 ರ ನೇಮಕಾತಿ ಹಗರಣದಲ್ಲಿ ಅವರ ವಿರುದ್ಧ ಕೆಲವು ಗಂಭೀರ ಆರೋಪಗಳು ಕೇಳಿ ಬಂದಿವೆ. ಉದ್ಯೋಗಗಳ ನೇಮಕಾತಿಯ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪವಿದೆ. ಉದ್ಯೋಗಾಕಾಂಕ್ಷಿಗಳಿಂದ ದೊಡ್ಡ ಮೊತ್ತದ ಹಣವನ್ನು ಲಂಚವಾಗಿ ಪಡೆದು ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment