ಸಿಎಂ, ಸಚಿವರ ಹೆಸರು ಹೇಳಲು ಇಡಿ ಒತ್ತಾಯ : ಕಾಂಗ್ರೆಸ್ ನಿಂದ ಸಾಂಕೇತಿಕ ಪ್ರತಿಭಟನೆ

3 Min Read

 

ಬೆಂಗಳೂರು: ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದರು.

ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್ಐಟಿ ತನಿಖೆ ಮುಗಿದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣ ಮಾಡುವುದಿಲ್ಲ ಎಂದರು. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿವೆ. ಎಸ್.ಐ.ಟಿ ಯನ್ನು 31-5.2024 ರಂದು ರಚಿಸಲಾಗಿದೆ. 3-6-2024 ರಂದು ಸಿಬಿಐ ಗೆ ಬ್ಯಾಂಕ್ ವತಿಯಿಂದ ದೂರು ನೀಡಲಾಗಿದೆ. ಅದರಲ್ಲಿ ಶುಚಿ ಸ್ಮಿತಾ ರಾವುಲ್, ದೀಪಾ ಹಾಗು ಕೃಷ್ಣಮೂರ್ತಿ ಇವರ ಮೇಲೆ ದೂರು ನೀಡಲಾಗಿದೆ. ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿದೆ. ಒಂದೇ ಹಗರಣದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿರುವುದು ವಿಶೇಷ. ಮೂರು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ಬಗ್ಗೆ ತನಿಖೆ ಮಾಡುವುದು ಈವರೆಗೆ ನನ್ನ ಅನುಭವಕ್ಕೆ ಬಂದಿರಲಿಲ್ಲ.
ನಾವು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿಲ್ಲ. ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ . ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ ರಸ್ತೆ ಶಾಖೆಯಿಂದ ತೆಲಂಗಾಣಕ್ಕೆ ಹೋಗಿರುವುದು 89.63 ಕೋಟಿ ರೂ.ಗಳು. ಎಸ್. ಐ.ಟಿ ರಚನೆಯಾದ ಮೇಲೆ ತ್ವರಿತವಾಗಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ 12 ಜನರನ್ನು ಬಂಧಿಸಿದ್ದು, ಬೇರೆ ಬೇರೆ ಜನರು ಹಂಚಿಕೊಂಡಿದ್ದ ಮೊತ್ತದಲ್ಲಿ 34 ಕೋಟಿ ರೂಪಾಯಿ ನಗದನ್ನು ಹಿಂಪಡೆದಿದ್ದಾರೆ. 89.63 ಕೋಟಿ . 46 ಕೋಟಿ ರೂ.ಗಳನ್ನು ಫ್ಸ್ತ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ , ರತ್ನಾಕರ ಬ್ಯಾಂಕ್ ಲೀ., ನಲ್ಲಿ 46 ಕೋಟಿ ರೂಪಾಯಿ ಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಒತ್ತು 85.25 ಕೋಟಿ ಹಿಂಪಡೆದು , ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಒಟ್ಟು ಅಕ್ರಮವಾಗಿರುವುದು 85.63 ಕೋಟಿಗಳು. ಎಸ್. ಐ ಟಿ ಅವರು ಶೇ.95% ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದರು.

 

ಅಕ್ರಮವಾಗಲು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ, ಉಪವ್ಯವಸ್ಥಾಪಕರು, ಕ್ರೆಡಿಟ್ ಅಧಿಕಾರಿಗಳು ಕಾರಣ ಎಂದು ಬ್ಯಾಂಕಿನಿಂದ ಸೂರು ನೀಡಲಾಗಿದ್ದು ಸಿಬಿಐ ತನಿಖೆ ಮಾಡುತ್ತಿದೆ. ಅವರೇನು ಮಾಡಿದ್ದಾರೆಂದು ತಿಳಿದಿಲ್ಲ. ಇಡಿ ಯವರು ಸ್ವಯಂ ಪ್ರೇರಿತವಾಗಿ ತನಿಖೆ ಪ್ರಾರಂಭ ಮಾಡಿದ್ದು , ನಾಗೇಂದ್ರ ಹಾಗೂ ದದ್ದಲ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ,ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಎಂಬುವರು ಹೇಳಿಕೆಯನ್ನು ಕೊಟ್ಟಿದ್ದರೂ ಇವರೇ ಆದೇಶ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹಾಗೂ ಇತರೆ ಸಚಿವರ ಹೆಸರನ್ನು ಬರೆದು ಕೊಡುವಂತೆ ಒತ್ತಾಯ ಮಾಡಿದ್ದಾರೆ. 187.33 ಕೋಟಿಗಳಲ್ಲಿ 43.33 ಕೋಟಿ ರೂಪಾಯಿ ಖಜಾನೆಯಿಂದ ಹೋಗಿದೆ. ಅದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ಹಾಗೂ ಆರ್ಥಿಕ ಇಲಾಖೆ ಪಾತ್ರ ಇದರಲ್ಲಿ ಇರುವುದಿಲ್ಲ. ಬಜೆಟ್ ಒಮ್ಮೆ ಅನುಮೋದನೆಯಾದ ಮೇಲೆ ಅನುದಾನ ಕಾರ್ಯದರ್ಶಿಗಳಿಗೆ, ಅಲ್ಲಿಂದ ಅದನ್ನು ನಿರ್ದೇಶಕರಿಗೆ ಹಾಗೂ ನಿರ್ದೇಶಕರು ಅನುದಾನವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡುತ್ತಾರೆ. ಇದು ಪ್ರಕ್ರಿಯೆ ಎಂದು ವಿವರಿಸಿದರು.

Share This Article
Leave a Comment

Leave a Reply

Your email address will not be published. Required fields are marked *