ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ಅವರಿಗೆ ಸಮನ್ಸ್ ನೀಡಿತ್ತು. ಇಬ್ಬರು ಬೇರೆ ಬೇರೆ ದಿನಾಂಕದಲ್ಲಿ ವಿಚಾತಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಆದರೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಬೆನ್ನಲ್ಲೆ ಇಡಿ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ರಾಹುಲ್ ಗಾಂದಿಯವರಿಗೆ ಸಮನ್ಸ್ ಜಾರಿ ಮಾಡಿದ್ದ ಜಾರಿ ನಿರ್ದೇಶನಾಲಯವು, ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.ಇದಕ್ಕೆ ಉತ್ತರಿಸಿದ್ದ ರಾಹುಲ್ ಗಾಂಧಿಯವರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು, ಜೂನ್ 5 ರಂದು ಭಾರತಕ್ಕೆ ವಾಪಸ್ಸಾಗುತ್ತಿದ್ದೇನೆ. ತನಿಖೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊಸದಾಗಿ ಮತ್ತೊಂದು ಸಮನ್ಸ್ ಜಾರಿ ಮಾಡಿರುವ ಜಾರಿ ನಿರ್ದೇಶನಾಲಯವು, ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ