Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸತೀಶ್ ಜಾರಕಿಹೋಳಿ ಮೆಲೆ ಇಡಿ ದಾಳಿ ; ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 10 : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್‍ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಮೇಲೆ ಇಡಿ ದಾಳಿ ನಡೆದಿದ್ದು ಇದನ್ನು ಬಿಜೆಪಿ ಷಡ್ಯಂತ್ರ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ದಾರುಯುದ್ದಕ್ಕೂ ನಡೆದ ಪ್ರತಿಭಟನಾ ವೇಳೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದು ಸತೀಶ್ ಜಾರಕಿಹೊಳಿ ಪರ ಬಿತ್ತಿ ಪತ್ರಗಳ ಪ್ರದರ್ಶನಗೊಂಡಿದ್ದವು. ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಇಡಿ ಇಲಾಖೆ ವಿರುದ್ಧ ಕಾಂಗ್ರೆಸ್ ಕಾರ್ಯ ಕರ್ತರ ಘೋಷಣೆ ಹಾಕಿದ್ದಾರೆ.

ಈ ಪ್ರತಿಭಟನೆಯಲ್ಲಿ ಡಿಸಿಸಿ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ಲಕ್ಷ್ಮೀಕಾಂತ್, ಉಪಾಧ್ಯಕ್ಷರಾದ ರವಿಕುಮಾರ್, ಮುನಿರಾ ಮುಕಾಂದರ್ ಮರುಳಾರಾಧ್ಯ ಕಾಂಗ್ರೆಸ್ ಎಸ್,ಟಿ.ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಗ್ಯಾರೆಂಟಿ ಅಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ತಾಲ್ಲೂಕು ಗ್ಯಾರೆಂಟಿ ಅಧ್ಯಕ್ಷ ಪ್ರಕಾಶ್, ನಾಗರಾಜ್ ಪೈಲಟ್, ಒಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಕುಮಾರ್ ಗೌಡ, ಸೇರಿದಂತೆ ಜಿಲ್ಲಾ ಕಾಂಗ್ರೆಸ್‍ನ ಕಾರ್ಯಕರ್ತರು ಬಾಗಿಯಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now