Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ಇಡಿ ದಾಳಿ..!

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 02 : ಆನ್ಲೈನ್ ಬೆಟ್ಟಿಂಗ್ ಆಪ್ ಗೆ ಅಕ್ರಮ ಹಣ ವರ್ಗಾವಣೆಯ ಆರೋಪ ಹೊತ್ತಿರುವ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಳ್ಳಕೆರೆ ಪಟ್ಟಣದಲ್ಲಿರುವ ನಿವಾಸದ ಮೇಲೆ ದಾಳಿಯಾಗಿದೆ. ವೀರೇಂದ್ರ ಪಪ್ಪಿ ಅವರು ಶ್ರೀಲಂಕಾ, ನೇಪಾಳ ಮತ್ತು ಜಾರ್ಜಿಯಾ ದೇಶಗಳ ಕೆಲ ಶೆಲ್ ಕಂಪನಿಗಳು ಮತ್ತು ಕ್ಯಾಸಿನೊದೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಮತ್ತೆ ಶೋಧ ಕಾರ್ಯ ಶುರು ಮಾಡಿದ್ದಾರೆ.

ಸೈಬರ್ ವಂಚನೆಯ ಹಣವನ್ನು ಬಳಸಿಕೊಂಡು ಕ್ರೆಡಿಟ್ ಕಾರ್ಡ್ ಪಾವತಿ ತೋರಿಸುವ ಮುಖಾಂತರ ವೀರೇಂದ್ರಗೆ ಸೇರಿದ ಕ್ಯಾಸಿನೋಗಳ ನಗದು ಹಣವನ್ನು ಕಾನೂನು ಬದ್ಧ ಆದಾಯವಾಗಿ ಪರಿವರ್ತಿಸಿರುವ ಶಂಕೆಯೂ ವ್ಯಕ್ತವಾಗಿದೆ. ಇ.ಡಿ.ಶೋಧನೆ ವೇಳೆ ವೀರೇಂದ್ರ ಸಾಗರೋತ್ತರ ವ್ಯವಹಾರ ನಡೆಸುತ್ತಿರುವ ಸಂಬಂಧ ಕೆಲ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಹೀಗಾಗಿ ಇ.ಡಿ. ಅಧಿಕಾರಿಗಳು ಈ ಶೆಲ್‌ ಕಂಪನಿಗಳು ಹಾಗೂ ಸಾಗರೋತ್ತರ ವ್ಯವಹಾರದ ಬಗ್ಗೆ ಕೆ.ಸಿ.ವೀರೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದುರ್ಗದಲ್ಲಿರುವ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಒಂದಷ್ಟು ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದರು. ಹಣ, ಚಿನ್ನಾಭರಣವನ್ನೆಲ್ಲಾ ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಲಾಗುತ್ತಿದೆ. ಇದಕ್ಕೆಲ್ಲಾ ನಮ್ಮ ಬಳಿ ದಾಖಲೆಗಳಿದಾವೆ. ಅವರು ಕೇಳಿದಕ್ಕೆಲ್ಲ ಉತ್ತರ ಕೊಡುತ್ತೇವೆ ಅಂತ ಕೂಡ ವೀರೇಂದ್ರ ಪಪ್ಪಿ ಅವರ ಸಹೋದರ ಮಾಹಿತಿ‌ ನೀಡಿದ್ದರು. ಈಗ ನೋಡಿದರೆ ಎರಡನೇ ಬಾರಿ ಇಡಿ ದಾಳಿ ನಡೆಸಿರುವುದು ಆಶ್ಚರ್ಯವೆನಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...