Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ ನಾಗೇಂದ್ರ ಹಾಗೂ ಸಂಸದ ಇ ತುಕಾರಾಂ ಸೇರಿದಂತೆ ಹಲವರಿಗೆ ಇಡಿ ಶಾಕ್..!

---Advertisement---

 

ಬಳ್ಳಾರಿಯಲ್ಲಿ ಶಾಸಕರು, ಮಾಜಿ ಸಚಿವರು, ಸಂಸದರಿಗೆ ಇಡಿ ಬೆಳ್ಳಂ ಬೆಳಗ್ಗೆ ಇಡಿ ಶಾಕ್ ನೀಡಿದೆ. ವಾಲ್ಮೀಕಿ ನಿಗಮದ ಬಹುಕೋಡಿ ಹಗರಣಕ್ಕೆ ಸಂಬಂಧಿಸಿದಂತೆ, ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ಮಾಡಲಾಗಿದೆ. ಲೋಕಸಭಾ ಚುನಾವಣೆ ವೇಳೆ, ವಾಲ್ಮೀಕಿ‌ನಿಗಮದ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪ ಇತ್ತು. ಹೀಗಾಗಿ ಅಧಿಕಾರಿಗಳು ಅದಕ್ಕೆ ಸಂಬಂಧಿಸಿದಂತೆ ಏನಾದ್ರೂ ದಾಖಲೆಗಳು ಸಿಗಬಹುದಾ ಎಂಬ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಬಳ್ಳಾರಿಯ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಜ ಗಣೇಶ್, ಕೂಡ್ಲಗಿ ಶಾಸಕ ಶ್ರೀನಿವಾಸ್ ಮನೆ ಮೇಲೂ ಇಡಿ ದಾಳಿ ನಡೆಸಿದೆ. ಮನೆಯ ಬಾಗಿಲು ಕ್ಲೋಸ್ ಮಾಡಿ ವಿಚಾರಣೆ ಮಾಡ್ತಿದ್ದಾರೆ. ಇಡಿ ಅಧಿಕಾರಿಗಳ ದಾಳಿ ವೇಳೆ ಮನೆ ಕೆಲಸದ ಓರ್ವ ಮಹಿಳೆ ಎಂಟ್ರಿ ನೀಡಿದ್ದರು. ಈ ವೇಳೆ ಇಡಿ ಅಧಿಕಾರಿಗಳ ಅನುಮತಿಯನ್ನ ಪಡೆದು ಮಹಿಳೆ ಒಳಗೆ ಹೋಗಿದ್ದಾರೆ. ಅವರನ್ನ ಬಿಟ್ಟರೆ ಬೇರೆ ಯಾರಿಗೂ ಅವಕಾಶ ನೀಡದೆ ಪರಿಶೀಲನೆ ನಡೆಸುತ್ತಿದ್ದಾರೆ.

ಅತ್ತ ಬೆಂಗಳೂರಿನಲ್ಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರಗೂ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು, ಶಾಸಕರ ಭವನದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ವಾಲ್ಮೀಕಿ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರು ಅರೆಸ್ಟ್ ಆಗಿದ್ದಲ್ಲದೆ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಆಗಿತ್ತು. ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮನೆಯಲ್ಲೂ ದಾಳಿ ನಡೆಸಿದ್ದಾರೆ. ಎಲ್ಲಾ ಶಾಸಕರ ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment