Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಗೆ ಇಡಿ ಶಾಕ್: ಅಬಕಾರಿ ಹೆಚ್ಚುವರಿ ಆಯುಕ್ತರ ನಿವಾಸಗಳ ಮೇಲೆ ದಾಳಿ

---Advertisement---

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಬಿಗ್ ಶಾಕ್ ನೀಡಿದೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ವೈ. ಮಂಜುನಾಥ್ ಅವರಿಗೆ ಸೇರಿದ ಒಟ್ಟು ಆರು ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ, ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿರುವ ವೈ. ಮಂಜುನಾಥ್ ಸದ್ಯ ಬೆಳಗಾವಿಯಲ್ಲಿ ಅಬಕಾರಿ ಇಲಾಖೆಯ ಉನ್ನತ ಅಧಿಕಾರಿಯಾಗಿದ್ದಾರೆ. ನಗರದ ಹನುಮಾನ್ ನಗರದಲ್ಲಿರುವ ಅವರ ಮುಖ್ಯ ನಿವಾಸ ಸೇರಿದಂತೆ ಅವರಿಗೆ ಸಂಬಂಧಿಸಿದ ವಿವಿಧ ಆರು ನೆಲೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳ ತಂಡಗಳು ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿವೆ.

ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರನಾಗಿರುವ ಮಂಜುನಾಥ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು, ಬಾರ್ ಅಂಡ್ ರೆಸ್ಟೋರೆಂಟ್ಗಳು ಸೇರಿದಂತೆ ಭಾರಿ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದಾಳಿಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ತನಿಖೆಗೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ 10ಕ್ಕೂ ಹೆಚ್ಚು ಅರೆಸೇನಾ ಪಡೆಯ ಯೋಧರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಶಸ್ತ್ರ ಪಡೆಗಳ ಬಿಗಿ ಕಾವಲಿನಲ್ಲಿ ಇಡಿ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

Join WhatsApp

Join Now

Join Telegram

Join Now